ಭುವನೇಶ್ವರ್, ಒಡಿಶಾ: ಶ್ರೀ ಜಗನ್ನಾಥ ದೇವಾಲಯ ಆಡಳಿತ ಮಂಡಳಿಯು ದೇವಾಲಯಕ್ಕೆ ಸಾರ್ವಜನಿಕರಿಗೆ ಇರುವ ಪ್ರವೇಶ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ಜೂನ್ 15ರವರೆಗೆ ನಿಯಮ ಜಾರಿಯಲ್ಲಿರಲಿದೆ.
ಸೋಮವಾರ ಈ ಕುರಿತಂತೆ ಶ್ರೀ ಜಗನ್ನಾಥ ದೇವಾಲಯ ಆಡಳಿತ ಮಂಡಳಿ ಸಭೆ ನಡೆಸಿದ್ದು, ಎರಡನೇ ಕೋವಿಡ್ ಅಲೆ ತೀವ್ರಗೊಂಡಿರುವ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೇವಾಲಯದ ಮುಖ್ಯ ಆಡಳಿತಾಧಿಕಾರಿ ಡಾ.ಕೃಷ್ಣಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿಶ್ವದ ಅತಿ ಉದ್ದದ ಎಲ್ಪಿಜಿ ಪೈಪ್ಲೈನ್ಗೆ ಯೋಜನೆಗೆ ಚಾಲನೆ
ಈ ಸಭೆಯಲ್ಲಿ ಪುರಿ ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಮತ್ತು ದೇವಾಲಯದ ಅಧಿಕಾರಿಗಳು ಭಾಗವಹಿಸಿದ್ದರು. ಇದರ ಜೊತೆಗೆ ಕಾಲ ಕಾಲಕ್ಕೆ ಕೋವಿಡ್ ಮಾರ್ಗಸೂಚಿಗಳನ್ನು ಪರಿಷ್ಕರಣೆ ಮಾಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.