ETV Bharat / bharat

ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಮಹಾರಾಷ್ಟ್ರ ಪ್ರವೇಶ - ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು ದಕ್ಷಿಣ ರಾಜ್ಯಗಳಲ್ಲಿ ಸಾಗಿ, ಇದೀಗ ತೆಲಂಗಾಣದಿಂದ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್‌ನಲ್ಲಿರುವ ಮದ್ನೂರ್ ನಾಕಾವನ್ನು ಇಂದು ಸಂಜೆ ಪ್ರವೇಶಿಸಲಿದೆ.

ಭಾರತ್ ಜೋಡೋ ಯಾತ್ರೆ
bharat jodo yatra
author img

By

Published : Nov 7, 2022, 9:23 AM IST

ನಾಂದೇಡ್(ಮಹಾರಾಷ್ಟ್ರ): ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದಕ್ಷಿಣ ರಾಜ್ಯಗಳಲ್ಲಿ ಪೂರ್ಣಗೊಂಡಿದ್ದು, ಇಂದು ಮಹಾರಾಷ್ಟ್ರ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅದ್ಧೂರಿ ಸ್ವಾಗತ ಕೋರಲು ಸಜ್ಜಾಗಿದೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಸಾಗಿದ್ದು, ಇದೀಗ ತೆಲಂಗಾಣದಿಂದ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್‌ನಲ್ಲಿರುವ ಮದ್ನೂರ್ ನಾಕಾವನ್ನು ಸಂಜೆ ತಲುಪಲಿದೆ.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ: ಮಕ್ಕಳೊಂದಿಗೆ ರಾಹುಲ್​ ಗಾಂಧಿ ರನ್ನಿಂಗ್ ರೇಸ್

ಭಾರತ್ ಜೋಡೋ ಯಾತ್ರೆಯು ಮುಂದಿನ 14 ದಿನಗಳ ಪ್ರವಾಸದಲ್ಲಿ ಮಹಾರಾಷ್ಟ್ರದ 15 ವಿಧಾನಸಭಾ ಕ್ಷೇತ್ರಗಳು ಮತ್ತು ಆರು ಸಂಸದೀಯ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಮಧ್ಯಪ್ರದೇಶವನ್ನು ಪ್ರವೇಶಿಸುವ ಮೊದಲು 'ಮಹಾ' ರಾಜ್ಯದ ಐದು ಜಿಲ್ಲೆಗಳಲ್ಲಿ 381 ಕಿಮೀ ದೂರ ಕ್ರಮಿಸಬೇಕಿದೆ. ನವೆಂಬರ್ 10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ರಾಹುಲ್​ ಮಾತನಾಡುವರು.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ನವೆಂಬರ್ 8 ರಂದು ರಾಹುಲ್​ ಗಾಂಧಿ ಜೊತೆ ಸೇರಿ ಯಾತ್ರೆಗೆ ಸಾಥ್​ ನೀಡಲಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅವರು ಕೇವಲ ಒಂದು ಮೈಲಿಗಿಂತ ಕಡಿಮೆ ನಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಜನ ಸೇರಿಸದವರಿಗೆ ಟಿಕೆಟ್ ಕೈ ತಪ್ಪುವ ಆತಂಕ

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಾಜಿ ಸಚಿವ ಆದಿತ್ಯ ಠಾಕ್ರೆ ತಮ್ಮ ವೇಳಾಪಟ್ಟಿಯನ್ನು ಇನ್ನೂ ಖಚಿತಪಡಿಸಿಲ್ಲ. ಇಬ್ಬರೂ ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದಿಂದ ಅರವಿಂದ್ ಸಾವಂತ್ ಮತ್ತು ಮನೀಶಾ ಕಾಯಂಡೆ, ನಾನಾ ಪಟೋಲೆ, ಬಾಳಾ ಸಾಹೇಬ್ ಥೋರಟ್, ಅಶೋಕ್ ಚವ್ಹಾಣ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಬಾಲಕನ ಕರಾಟೆ ಪಟ್ಟು ಸರಿಪಡಿಸಿದ ರಾಹುಲ್​: ಪರೋಕ್ಷವಾಗಿ ಬಿಜೆಪಿ ಕಾಲೆಳೆದ ಕಾಂಗ್ರೆಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.