ETV Bharat / bharat

ರಾಹುಲ್ ಗಾಂಧಿಗೆ ಶಿಕ್ಷೆ ವಿಚಾರ: ನಾಳೆ ಗುಜರಾತ್​ ಹೈಕೋರ್ಟ್​ನಲ್ಲಿ ವಿಚಾರಣೆ - ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ

ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆ ಏ.29 ರಂದು ಗುಜರಾತ್ ಹೈಕೋರ್ಟ್​ನಲ್ಲಿ ನಡೆಯಲಿದೆ. ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಕೆಳಹಂತದ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದೆ.

ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ನಾಳೆ ಗುಜರಾತ್​ ಹೈಕೋರ್ಟ್​ನಲ್ಲಿ ವಿಚಾರಣೆ
Rahul Gandhi: Defamation Case hiring tomorrow At Gujarat High Court Ahmedabad
author img

By

Published : Apr 28, 2023, 4:16 PM IST

ನವದೆಹಲಿ: ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ಬಗ್ಗೆ ನಾಳೆ ಅಂದರೆ ಏಪ್ರಿಲ್ 29 ರಂದು ವಿಚಾರಣೆ ನಡೆಸಲಿದೆ. ರಾಹುಲ್ ಗಾಂಧಿ ಅವರ ಅರ್ಜಿಯನ್ನು ಸೂರತ್ ಸೆಷನ್ಸ್ ಕೋರ್ಟ್ ತಿರಸ್ಕರಿಸಿದ ನಂತರ, ಅವರು ಈ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೂರತ್ ಸೆಷನ್ಸ್ ಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಸೂರತ್‌ನ ಸೆಷನ್ಸ್ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನಲ್ಲಿ ಪರಿಷ್ಕರಣೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಮೊದಲು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದರಿಂದಾಗಿ ನ್ಯಾಯಮೂರ್ತಿ ಹೇಮಂತ್ ಪ್ರಚಾರಕ್ ಈಗ ಈ ಅರ್ಜಿಯನ್ನು ಆಲಿಸಲಿದ್ದಾರೆ. ಏಪ್ರಿಲ್ 29 ರಂದು ವಿಚಾರಣೆ ನಡೆಯಲಿದೆ. ಇದೇ ಮಾರ್ಚ್ 23 ರಂದು ಸೂರತ್ ನ್ಯಾಯಾಲಯವು 2019 ರಲ್ಲಿ ಮೋದಿ ಉಪನಾಮದ ಬಗ್ಗೆ ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳ ಪ್ರಕರಣದಲ್ಲಿ ತೀರ್ಪು ನೀಡಿತು. ನ್ಯಾಯಾಲಯವು ಸೆಕ್ಷನ್ 504 ರ ಅಡಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಆದರೆ ಈ ಆದೇಶ ಜಾರಿಗೆ ನ್ಯಾಯಾಲಯ ಕೆಲ ದಿನಗಳ ಕಾಲಾವಕಾಶ ನೀಡಿದೆ. ಜೊತೆಗೆ ರಾಹುಲ್ ಅವರಿಗೆ ತಕ್ಷಣದ ಜಾಮೀನು ಕೂಡ ನೀಡಲಾಗಿದೆ. ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಈ ಆದೇಶವನ್ನು ಪ್ರಶ್ನಿಸಿ ಶಿಕ್ಷೆಗೆ ತಡೆ ಕೋರಿದ್ದರು. ಆದರೆ ಸೂರತ್ ನ್ಯಾಯಾಲಯವು ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ ಮತ್ತು ರಾಹುಲ್ ಗಾಂಧಿ ಅವರ ಅರ್ಜಿಯನ್ನು ವಜಾಗೊಳಿಸಿದೆ.

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಎಲ್ಲಾ ಕಳ್ಳರ ಉಪನಾಮ ಮೋದಿಯೇ ಆಗಿರುವುದು ಏಕೆ? ಎಂದು ಹೀಯಾಳಿಸಿದ್ದರು. ಈ ಬಗ್ಗೆ ಬಿಜೆಪಿ ಶಾಸಕ ಹಾಗೂ ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ರಾಹುಲ್ ಆಕ್ರೋಶ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಾರ್ವಜನಿಕ ಸಭೆಯೊಂದರಲ್ಲಿ ಆತ್ಮಹತ್ಯೆ ವಿಷಯದಲ್ಲಿ ಜೋಕ್ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿಯವರ ಹೇಳಿಕೆ ಸೂಕ್ಷ್ಮತೆ ಇಲ್ಲದ ಮಾತು ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಆತ್ಮಹತ್ಯೆಗಳ ಬಗ್ಗೆ ಜೋಕ್ ಮಾಡಿದ್ದಾರೆ. ಆತ್ಮಹತ್ಯೆಗಳ ವಿಚಾರದಲ್ಲಿ ಇಷ್ಟೊಂದು ಬೇಜವಾಬ್ದಾರಿಯಾಗಿರಲು ಹೇಗೆ ಸಾಧ್ಯ? ಅಂಕಿ ಅಂಶಗಳ ಪ್ರಕಾರ 2021ರಲ್ಲಿ 1.64 ಲಕ್ಷಕ್ಕೂ ಅಧಿಕ ಭಾರತೀಯರು ಆತ್ಮಹತ್ಯೆಗಳಿಂದ ಸಾವನ್ನಪ್ಪಿದ್ದಾರೆ. ಪ್ರತಿದಿನ ಭಾರತದಲ್ಲಿ 450 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಪ್ರಧಾನಿಗೆ ಜೋಕ್ ತರ ಕಾಣುತ್ತಿದೆ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಚೀನಾ ರಕ್ಷಣಾ ಸಚಿವರ ಕೈಕುಲುಕದೇ ಮೌನವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.