ETV Bharat / bharat

'ಇತಿಹಾಸ ಪುನರಾವರ್ತನೆಯಾಗುತ್ತಿದೆ'.. ರಾಹುಲ್​ ಬಂಧನದ ಬೆನ್ನಲ್ಲೇ ಈ ರೀತಿ ಟ್ವೀಟ್ ಮಾಡಿದ ಕಾಂಗ್ರೆಸ್​ - ಸೋನಿಯಾ ಗಾಂಧಿ ವಿಚಾರಣೆ

ಸೋನಿಯಾ ಗಾಂಧಿ ಅವರನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಅನೇಕರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Rahul Gandhi detained during protest
Rahul Gandhi detained during protest
author img

By

Published : Jul 26, 2022, 3:21 PM IST

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್​ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಅಧಿನಾಯಕಿಯನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್​​ನ 50 ಸಂಸದರು, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಠಾಣೆಗೆ ಕರೆದೊಯ್ದಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​​ ಪಕ್ಷ ಟ್ವೀಟ್ ಮಾಡಿದ್ದು, ಇಂದಿರಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಫೋಟೋ ಶೇರ್ ಮಾಡಿಕೊಂಡಿದೆ. ಜೊತೆಗೆ ಇತಿಹಾಸ ಪುನರಾವರ್ತನೆಯಾಗ್ತಿದೆ ಎಂದು ಹೇಳಿದೆ.

  • जंजीर बढ़ा कर साध मुझे,
    हाँ, हाँ दुर्योधन! बाँध मुझे।

    बाँधने मुझे तो आया है,
    जंजीर बड़ी क्या लाया है?

    इतिहास दोहरा रहा है...#SatyagrahaWithSoniaGandhi pic.twitter.com/wroc7cLtk9

    — Congress (@INCIndia) July 26, 2022 " class="align-text-top noRightClick twitterSection" data=" ">

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸದಂತೆ ಇಡಿಯಿಂದ ಸೋನಿಯಾ ಗಾಂಧಿ ಇಂದು ಎರಡನೇ ಸಲ ವಿಚಾರಣೆಗೊಳಪಟ್ಟಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಸ್ಮಾರಕವಾದ ರಾಜ್ ಘಾಟ್‌ನಲ್ಲಿ ‘ಸತ್ಯಾಗ್ರಹ’ ನಡೆಸಲು ಅನುಮತಿ ನೀಡಬೇಕು ಎಂಬ ಅವರ ಬೇಡಿಕೆಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದರು. ಆ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿತ್ತು.

ಧರಣಿ ಕುಳಿತ ರಾಹುಲ್​: ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು. ಬಳಿಕ ವಿಜಯ ಚೌಕ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರ ಜೊತೆಗೂಡಿ ಧರಣಿ ಕುಳಿತರು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ರಾಹುಲ್​ ಗಾಂಧಿ, ರಾಜ್ಯದ ಸಂಸದ ಡಿ.ಕೆ.ಸುರೇಶ್​ ಸೇರಿದಂತೆ ಹಲವು ಸಂಸದರನ್ನು ವಶಕ್ಕೆ ಪಡೆದರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಕೂದಲು ಹಿಡಿದು ಎಳೆದಾಡಿದ ಪೊಲೀಸ್​: ಪ್ರತಿಭಟನೆ ಸಂದರ್ಭದಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರ ಕೂದಲು ಹಿಡಿದು ಎಳೆದಾಡಿದ ಘಟನೆ ಕೂಡಾ ನಡೆದಿದೆ.

ಇದನ್ನೂ ಓದಿರಿ: ಸೋನಿಯಾ ವಿಚಾರಣೆಗೆ ಕಾಂಗ್ರೆಸ್ ವಿರೋಧ: ಧರಣಿ ಕುಳಿತ ರಾಹುಲ್​, ಡಿಕೆಸು ಪೊಲೀಸ್‌ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.