ವಾರಾಣಾಸಿ(ಉತ್ತರ ಪ್ರದೇಶ): ಪ್ರಯಾಗ್ ರಾಜ್ನ ಆನಂದ್ ಭವನ್ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಹಾಜರಾಗಲು ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಮಾನಕ್ಕೆ ಇಲ್ಲಿ ಲ್ಯಾಂಡಿಂಗ್ಗೆ ಅವಕಾಶ ನಿರಾಕರಣೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಅಜಯ್ ರಾಯ್, ವಾರಾಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರ ವಿಮಾನ ಕೆಳಗಿಳಿಯಲು ನಿರಾಕರಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾಶಿ ದೇಗುಲಕ್ಕೆ ಭೇಟಿ ನೀಡಲಿರುವ ನೆಪ ಹೇಳಿ ಅವರಿಗೆ ವಾರಾಣಾಸಿಗೆ ಅನುಮತಿ ನಿರಾಕರಿಸಲಾಗಿದೆ. ಆದರೆ, ಉದ್ದೇಶ ಪೂರ್ವಕವಾಗಿ ಅವರು, ಕಾಂಗ್ರೆಸ್ ನಾಯಕನ ವಿಮಾನ ಕೆಳಗಿಳಿಯಲು ಅನುಮತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
ವಯನಾಡುನಿಂದ ವಾರಾಣಾಸಿಗೆ ಬಂದ ವಿಮಾನ ರಾತ್ರಿ 10. 45ರ ಸುಮಾರಿಗೆ ಕೆಳಗೆ ಇಳಿಯಬೇಕಿತ್ತು. ಆದರೆ ವಿಮಾನ ನಿಲ್ದಾಣ ಪ್ರಾಧಿಕಾರ ಸರ್ಕಾರದ ಒತ್ತಡದ ಹಿನ್ನಲೆ ಅವರ ವಿಮಾನ ಕೆಳಗಿಳಿಯಲು ಅವಕಾಶ ನೀಡಲಿಲ್ಲ. ಅಧಿಕ ಸಂಖ್ಯೆಯ ವಿಮಾನಗಳ ಹಾರಾಟ ಮತ್ತು ಸಂಚಾರ ದಟ್ಟಣೆಯಿಂದಾಗಿ ಈ ಅವಕಾಶ ನಿರಕಾರಿಸುತ್ತಿರುವುದಾಗಿ ಅವರ ತಿಳಿಸಿದ್ದಾರೆ. ಆದರೆ, ಇದರ ಹಿಂದಿನ ಉದ್ದೇಶ ಬೇರೆ ಎಂದಿದ್ದಾರೆ ಎಂದರು.
ಇದೇ ವೇಳೆ ಮುಂದುವರೆದು ಮಾತನಾಡಿದ ರಾಯ್, ಬಿಜೆಪಿ ಸರ್ಕಾರಕ್ಕೆ ರಾಹುಲ್ ಗಾಂಧಿ ಕಂಡರೆ ಭಯ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ ಬಳಿಕ ಪ್ರಧಾನಿಗಳು ಚಿಂತಿತರಾಗಿದ್ದಾರೆ. ಈ ಹಿನ್ನಲೆ ಅವರು ಇದೀಗ ಕಾಂಗ್ರೆಸ್ ನಾಯಕನಿಗೆ ತೊಂದರೆ ನೀಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ರಾಹುಲ್ ಗಾಂಧಿ ಸೋಮವಾರ ರಾತ್ರಿ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಬನರಾಸ್ಗೆ ಬಂದ ಬಳಿಕ ಅವರು ಪ್ರಯಾಗ್ ರಾಜ್ಗೆ ತೆರಳಬೇಕಿತ್ತು. ಅವರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರು ಕೂಡ ಸಿದ್ದರಾಗಿದ್ದರು. ಆದರೆ, ತಕ್ಷಣಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಸಂಚಾರ ದಟ್ಟಣೆ ನೆಪವೊಡ್ಡಿತು ಎಂದು ಆರೋಪಿಸಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ವಾರಾಣಾಸಿಯ ಕೊಟ್ವಾಲ್ ಬಾಬಾ ಕಾಲಾ ಬೈರವ್ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಸೋಮವಾರ ಸಂಜೆ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಮೊದಲ ಬಾರಿ ಕಾಶಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದು, ಅವರು ಇಲ್ಲಿನ ದಶಶ್ವಮೇಧ ಘಾಟ್ನಲ್ಲಿ ನಡೆಯುವ ಪ್ರಸಿದ್ಧ ಗಂಗಾ ಆರತಿಯಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿತ್ತು.
ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಮೇಲಿನ ಚರ್ಚೆ ವೇಳೆ ಹಿಂಡನ್ ಬರ್ಗ್ ವರದಿ ಉಲ್ಲೇಖಿಸಿ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆರೋಪ ಮಾಡಿದ್ದರು. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅದಾನಿ ಸಂಪತ್ತು ಹೆಚ್ಚಾಗಿದೆ ಎಂದಿದ್ದರು.
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಇದೊಂದು ಹುರುಳಿಲ್ಲದ ಆರೋಪ. ಇದಕ್ಕೆ ಯಾವುದೇ ಸಾಕ್ಷಿ ಇಲ್ಲ. ಸದನಕ್ಕೆ ಮತ್ತು ಪ್ರಧಾನಿ ವರ್ಚಸ್ಸಿಗೆ ರಾಹುಲ್ ಗಾಂಧಿ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂದ ರಾಹುಲ್ ಗಾಂಧಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದ್ದು, ಅವರ ವಿರುದ್ಧ ಕ್ರಮಕ್ಕೆ ಮುಂದಾಗಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದರು.
ಇದನ್ನೂ ಓದಿ: ಎಲ್‌ಎಸಿ ಕಣ್ಗಾವಲಿನ ಭಾರತೀಯ ಡ್ರೋನ್ ಪತನ