ಮುಂಬೈ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಇಂದು ವಿದೇಶ ಪ್ರವಾಸ ಕೈಗೊಂಡಿದ್ದು, ಜುಲೈ 17 ರಂದು ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಇದೇ ತಿಂಗಳು 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಸದರಾಗಿರುವ ರಾಹುಲ್ ಗಾಂಧಿ ಅದಕ್ಕೂ ಒಂದು ದಿನ ಮುಂಚೆ ಸ್ವದೇಶಕ್ಕೆ ವಾಪಸಾಗಲಿದ್ದಾರೆ. ರಾಹುಲ್ ಗಾಂಧಿಯವರು ಯಾವ ದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಈ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.