ETV Bharat / bharat

ಅಮ್ಮನೊಂದಿಗೆ ವಾಸಿಸುತ್ತಿದ್ದ ರಾಹುಲ್‌ ಗಾಂಧಿ ಶೀಘ್ರದಲ್ಲೇ ಹೊಸ ಮನೆಗೆ ಶಿಫ್ಟ್‌ - ದೆಹಲಿಯ ಮಾಜಿ ಮುಖ್ಯಮಂತ್ರಿ ದಿವಂಗತ ಶೀಲಾ ದೀಕ್ಷಿತ್

ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ವಾಸಿಸುತ್ತಿದ್ದ ದೆಹಲಿಯ ನಿಜಾಮುದ್ದೀನ್ ಪೂರ್ವ ದಿಕ್ಕಿನಲ್ಲಿರುವ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯದಲ್ಲೇ ಶಿಫ್ಟ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Rahul Gandhi
ರಾಹುಲ್‌ ಗಾಂಧಿ ನೂತನ ನಿವಾಸ
author img

By

Published : Jul 13, 2023, 10:36 AM IST

ನವದೆಹಲಿ: ಸಂಸತ್​ ಸದಸ್ಯತ್ವ ಸ್ಥಾನದಿಂದ ಅನರ್ಹಗೊಂಡು ಸರ್ಕಾರಿ ಬಂಗಲೆ ತೊರೆದಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ನೂತನ ಮನೆ ದೊರೆತಿದೆ. ಇಲ್ಲಿನ ಆಗ್ನೇಯ ದೆಹಲಿಯ ಪೂರ್ವ ನಿಜಾಮುದ್ದೀನ್ ಪ್ರದೇಶದಲ್ಲಿರುವ ಮನೆಗೆ ಶೀಘ್ರದಲ್ಲೇ 'ರಾಗಾ' ತಮ್ಮ ಕಚೇರಿ ಮತ್ತು ನಿವಾಸವನ್ನು ಸ್ಥಳಾಂತರಿಸುವ​​ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೆ, ಈಗ ತೆರಳಲಿರುವ ಮನೆಗೆ ರಾಜಕೀಯ ಇತಿಹಾಸವೂ ಇದೆ.

ಮಾರ್ಚ್‌ನಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರು ತಮ್ಮ 12ನೇ ತುಘಲಕ್ ಲೇನ್ ನಿವಾಸವನ್ನು ಏಪ್ರಿಲ್​ನಲ್ಲಿ ತೆರವು ಮಾಡಿದ್ದರು. ನಂತರ ತಮ್ಮ ತಾಯಿ ಸೋನಿಯಾ ಗಾಂಧಿಯವರ ಅಧಿಕೃತ ನಿವಾಸ 10 ಜನಪಥ್‌ನಲ್ಲಿ ವಾಸಿಸುತ್ತಿದ್ದಾರೆ. ಈ ಬೆನ್ನಲ್ಲೇ ನೂತನ ಮನೆಗೆ ಹುಡುಕಾಟ ನಡೆಸುತ್ತಿದ್ದರು. ಈ ಹಿಂದೆ ರಾಹುಲ್​ ತಮ್ಮ ಸರ್ಕಾರಿ ಬಂಗಲೆಯನ್ನು ತೊರೆದಿದ್ದಾಗ ಕಾಂಗ್ರೆಸ್​ ನಾಯಕರು, ಕಾರ್ಯಕರ್ತರು ತಮ್ಮ ಮನೆಗಳನ್ನು ಬಿಟ್ಟುಕೊಡಲು ಮುಂದಾಗಿದ್ದರು.

ಹೊಸ ಮನೆಯ ವಿಶೇಷತೆ : ದೆಹಲಿಯ ಮಾಜಿ ಮುಖ್ಯಮಂತ್ರಿ ದಿವಂಗತ ಶೀಲಾ ದೀಕ್ಷಿತ್ ಅವರ ಮನೆಯನ್ನು ರಾಹುಲ್ ಗಾಂಧಿ ಅವರು ತಮ್ಮ ಕಚೇರಿ ಮತ್ತು ನಿವಾಸವನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಲ್ಲಿಯವರೆಗೆ, ಶೀಲಾ ದೀಕ್ಷಿತ್ ಅವರ ಈ ಖಾಸಗಿ ನಿವಾಸದಲ್ಲಿ ಅವರ ಪುತ್ರ ಮತ್ತು ಮಾಜಿ ಸಂಸದ ಸಂದೀಪ್ ದೀಕ್ಷಿತ್ ವಾಸಿಸುತ್ತಿದ್ದರು. ಆದರೆ, ಅವರು ಈಗ ಅದೇ ಪ್ರದೇಶದಲ್ಲಿರುವ ತಮ್ಮ ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ, ರಾಹುಲ್ ಗಾಂಧಿ ಶೀಘ್ರದಲ್ಲೇ ನಿಜಾಮುದ್ದೀನ್ ಪೂರ್ವದ ಮನೆ ಸಂಖ್ಯೆ ಬಿ-2 ಗೆ ಸ್ಥಳಾಂತರವಾಗಬಹುದು ಎಂದು ಮೂಲಗಳು ಹೇಳುತ್ತಿವೆ. ಶೀಲಾ ದೀಕ್ಷಿತ್ ಅವರು 1991 ರಿಂದ 1998 ರವರೆಗೆ ಈ ಮನೆಯಲ್ಲಿ ತಂಗಿದ್ದರು. ಬಳಿಕ, ಕೇರಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಸೆಪ್ಟೆಂಬರ್ 2014 ರಲ್ಲಿ ಮತ್ತೆ ಅದೇ ಫ್ಲ್ಯಾಟ್‌ಗೆ ಸ್ಥಳಾಂತರಗೊಂಡರು.

ಈ ಹಿಂದೆ, ರಾಹುಲ್ ಗಾಂಧಿ ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಧಿ ಎಸ್ಟೇಟ್‌ನಲ್ಲಿ ತಮಗೆ ನಿಗದಿಪಡಿಸಿದ ಸರ್ಕಾರಿ ವಸತಿಗೃಹವನ್ನು ತೊರೆದ ನಂತರ ಈ ಮನೆಗೆ ತೆರಳಲು ಯೋಚಿಸಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೋದಿ ಉಪನಾಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಹಿನ್ನಡೆ: ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್

ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಪೂರ್ಣೇಶ್ ಮೋದಿ ಅವರು 2019 ರಲ್ಲಿ ಸಲ್ಲಿಸಿದ ಮೋದಿ ಉಪನಾಮೆ ಹೇಳಿಕೆಗಳ ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಮಾರ್ಚ್ 23 ರಂದು ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ, ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ತೀರ್ಪಿನ ಬಳಿಕ, ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರಾಹುಲ್​ ಅವರನ್ನು ಸಂಸತ್ತಿನ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ರಾಹುಲ್ ಗಾಂಧಿ 2019 ರಲ್ಲಿ ಕೇರಳದ ವಯನಾಡ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.