ETV Bharat / bharat

UPSC, SSC ಆಕಾಂಕ್ಷಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ - ಸೂರತ್ ನ್ಯಾಯಾಲಯ

ನವದೆಹಲಿಯ ಮುಖರ್ಜಿ ನಗರದಲ್ಲಿ ಕೇಂದ್ರ ಲೋಕಸೇವಾ ಆಯೋಗ ಹಾಗೂ ಸಿಬ್ಬಂದಿ ಆಯ್ಕೆ ಆಯೋಗದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಿದರು.

ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಾದ

author img

By

Published : Apr 20, 2023, 10:52 PM IST

Updated : Apr 20, 2023, 11:00 PM IST

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಮತ್ತು ಸಿಬ್ಬಂದಿ ಆಯ್ಕೆ ಆಯೋಗದ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮುಖರ್ಜಿ ನಗರ ಪ್ರದೇಶದಲ್ಲಿ ಭೇಟಿಯಾಗಿ ಸಂವಾದ ನಡೆಸಿದ್ದಾರೆ. ರಾಹುಲ್ ಗಾಂಧಿಯವರ, "ಮೋದಿ ಉಪನಾಮೆ" ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿದ ದಿನದಂದು ವಿದ್ಯಾರ್ಥಿಗಳೊಂದಿಗೆ ಗಾಂಧಿ ಸಭೆ ನಡೆಯಿತು. ರಾಹುಲ್​ಗಾಂಧಿ ವಿದ್ಯಾರ್ಥಿಗಳೊಂದಿಗೆ ರಸ್ತೆಬದಿಯಲ್ಲಿ ಕುರ್ಚಿ ಮೇಲೆ ಕುಳಿತು ಅವರ ನಿರೀಕ್ಷೆಗಳು ಮತ್ತು ಅನುಭವಗಳ ಬಗ್ಗೆ ಕೇಳಿದರು.

ಸೋಮವಾರ ಮುಂಜಾನೆ ರಾಹುಲ್ ಗಾಂಧಿ ಹಳೆಯ ದೆಹಲಿಯ ಮಟಿಯಾ ಮಹಲ್ ಮಾರುಕಟ್ಟೆ ಮತ್ತು ಬಂಗಾಳಿ ಮಾರುಕಟ್ಟೆಗೆ ಭೇಟಿ ನೀಡಿದರು. ಈ ಪ್ರದೇಶಗಳ ಜನಪ್ರಿಯ ಭಕ್ಷ್ಯಗಳನ್ನು ಸ್ವತಃ ಸೇವಿಸಿದರು. ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಎರಡು ದಿನಗಳ ನಂತರ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕಾಂಗ್ರೆಸ್ ನಾಯಕ, ರಂಜಾನ್ ತಿಂಗಳಲ್ಲಿ ಚಟುವಟಿಕೆಯಿಂದ ತುಂಬಿರುವ ಹಳೆಯ ದೆಹಲಿಯ ಚಾಂದಿನಿ ಚೌಕ್‌ಗೆ ಭೇಟಿ ನೀಡಿದರು.

ರಾಹುಲ್, ಮಟಿಯಾ ಮಹಲ್ ಪ್ರದೇಶದಲ್ಲಿನ ಪ್ರಸಿದ್ಧ "ಶರಬತ್" ಮಾರಾಟಗಾರರನ್ನು ಭೇಟಿಯಾದರು. ಈ ವೇಳೆ ಪ್ರಸಿದ್ಧ ತಿನಿಸುಗಳನ್ನು ಸವಿದರು. ಬಂಗಾಳಿ ಮಾರುಕಟ್ಟೆಯಲ್ಲಿ ನಾಥು ಸಿಹಿತಿಂಡಿಗಳಲ್ಲಿ "ಗೋಲ್ಗಪ್ಪಸ್" ರುಚಿ ಸೇವಿಸಿದರು. ಹಳೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕನ ಸುತ್ತ ದೊಡ್ಡ ಜನಸಮೂಹ ಜಮಾಯಿಸಿತ್ತು. ಜನರು ಕಿರಿದಾದ ರಸ್ತೆಗಳಲ್ಲಿ ಅವರನ್ನು ಹಿಂಬಾಲಿಸಿದರು. ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಮಾನಹಾನಿ ಕೇಸ್​: ಶಿಕ್ಷೆ ತಡೆ ಕೋರಿ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ಸೆಲ್ಫಿಗೆ ಪೈಪೋಟಿ: ಹೆಚ್ಚಿನ ಸಂಖ್ಯೆಯಲ್ಲಿ ಜನರು ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು ಮತ್ತು ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು. ಈ ವೇಳೆ ಹಲವು ವಿಚಾರಗಳ ಕುರಿತು ಜನರೊಂದಿಗೆ ರಾಹುಲ್ ಮಾತುಕತೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಭಾಯಿಸಲು ದೆಹಲಿ ಪೊಲೀಸ್ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಅನರ್ಹತೆ ಮುಂದುವರಿಕೆ..: ಮೋದಿ ಉಪನಾಮೆ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಬೇಕು ಎಂದು ರಾಹುಲ್​ ಗಾಂಧಿ ಕೋರಿದ್ದ ಅರ್ಜಿಯನ್ನು ಸೂರತ್ ನ್ಯಾಯಾಲಯ ಇಂದು ವಜಾಗೊಳಿಸಿದೆ. ಇದರಿಂದ ರಾಹುಲ್​ ಗಾಂಧಿ ಅವರ ಸಂಸದ ಸ್ಥಾನದ ಅನರ್ಹತೆ ಮುಂದುವರಿಯಲಿದೆ.

ನ್ಯಾಯಾಲಯದಲ್ಲಿ ಏನೇನಾಯ್ತು?: ಸೂರತ್​ನ ಕೆಳಹಂತದ ನ್ಯಾಯಾಲಯ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್​ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ವಿರುದ್ಧ ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಕೋರ್ಟ್​ನಲ್ಲಿ ಉಭಯ ಪಕ್ಷಗಳ ವಕೀಲರು ವಾದ-ಪ್ರತಿವಾದ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

ಇದನ್ನೂ ಓದಿ : ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತ: ರಾಹುಲ್ ಗಾಂಧಿ ಭವಿಷ್ಯ

Last Updated : Apr 20, 2023, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.