ETV Bharat / bharat

ಮೋದಿ ಉಪನಾಮ ಪ್ರಕರಣ: ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಸುಪ್ರೀಂ ಕದತಟ್ಟಿದ ರಾಹುಲ್​ ಗಾಂಧಿ - ಮೋದಿ ಉಪನಾಮದ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಗುಜರಾತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ದೂರುದಾರ ಪೂರ್ಣೇಶ್ ಮೋದಿ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿರುವ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Rahul Gandhi  Modi surname case  Rahul Gandhi moves SC  ಮೋದಿ ಉಪನಾಮ ಪ್ರಕರಣ  ತೀರ್ಪು ಪ್ರಶ್ನಿಸಿ ಸುಪ್ರೀಂ ಕದತಟ್ಟಿದ ರಾಹುಲ್​ ಮೊಕದ್ದಮೆಯ ದೂರುದಾರ ಪೂರ್ಣೇಶ್ ಮೋದಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಮೋದಿ ಉಪನಾಮದ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ  ಮನವಿಯನ್ನು ತಿರಸ್ಕರಿಸಿದ ಗುಜರಾತ್ ಹೈಕೋರ್ಟ್
ಮೋದಿ ಉಪನಾಮ ಪ್ರಕರಣ: ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಸುಪ್ರೀಂ ಕದತಟ್ಟಿದ ರಾಹುಲ್​ ಗಾಂಧಿ
author img

By

Published : Jul 15, 2023, 6:32 PM IST

ನವದೆಹಲಿ: ಮೋದಿ ಉಪನಾಮದ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ದೂರುದಾರ ಪೂರ್ಣೇಶ್ ಮೋದಿ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ಬರಲಿದೆ. ಜುಲೈ 7 ರಂದು ತಮ್ಮ ಮೋದಿ ಉಪನಾಮದ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿಯವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

'ಮೋದಿ ಉಪನಾಮ' ಟೀಕೆ ವಿರುದ್ಧ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಅನರ್ಹಗೊಂಡ ಸಂಸದರು ಕೋರಿ ಮಧ್ಯಂತರ ಪರಿಹಾರ ನೀಡಲು ನ್ಯಾಯಮೂರ್ತಿಗಳು ನಿರಾಕರಿಸಿದ್ದರು.

ಜಾಮೀನು ನೀಡಬಹುದಾದ, ಅರಿಯಲಾಗದ ಅಪರಾಧಕ್ಕಾಗಿ ತಮ್ಮ ಕಕ್ಷಿದಾರರು ಎರಡು ವರ್ಷಗಳ ಗರಿಷ್ಠ ಶಿಕ್ಷೆಗೆ ಒಳಪಟ್ಟರೆ, ಶಾಶ್ವತವಾಗಿ ಮತ್ತು ಬದಲಾಯಿಸಲಾಗದಂತೆ ತಮ್ಮ ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ವಕೀಲರು ವಾದಿಸಿದ್ದರು.

ಓದಿ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ: ಸುಪ್ರೀಂಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ ಪೂರ್ಣೇಶ್ ಮೋದಿ

ಏನಿದು ಪ್ರಕರಣ?: 2019ರ ಲೋಕಸಭೆಯ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡಿದ್ದ ರಾಹುಲ್​ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರು. ಎಲ್ಲ ಕಳ್ಳರು ಮೋದಿ ಎಂಬ ಉಪನಾಮ ಹೇಗೆ ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಮೋದಿ ಉಪನಾಮದ ಟೀಕೆ ವಿರುದ್ಧ ಗುಜರಾತ್​ನ ಸೂರತ್ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್​ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ಮಾರ್ಚ್​ 23ರಂದು ಪ್ರಕರಣದ ತೀರ್ಪು ನೀಡಿದ್ದ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500ರ ಅಡಿ ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಪರಿಣಾಮ ರಾಹುಲ್​ ಗಾಂಧಿ ತಮ್ಮ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಮತ್ತೊಂದೆಡೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್​ ಗಾಂಧಿ ಗುಜರಾತ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ನೇತೃತ್ವದ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೇ, ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿತ್ತು. ಇದರ ವಿರುದ್ಧದ ಸುಪ್ರೀಂ ಕೋರ್ಟ್​ ಮೊರೆ ಹೋಗುವುದಾಗಿ ಕಾಂಗ್ರೆಸ್​ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.