ನವದೆಹಲಿ: ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಂದು ಪದವಿ ಒಂದೇ ಪಂಚಣಿ (ಒಆರ್‌ಒಪಿ) ಪರಿಶೀಲನೆಯ ಬಗ್ಗೆ ರಕ್ಷಣಾ ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಕೆಲವು ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ಸಮಿತಿಗೆ ಮಾಹಿತಿ ನೀಡಿದರು. ಇವುಗಳ ಬಗ್ಗೆ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ನಂತರ ಪರಿಶೀಲನೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಹಿರಿಯ ಮುಖಂಡ ಜುವಾಲ್ ಓರಮ್ ಅವರ ಅಧ್ಯಕ್ಷತೆಯಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ ಸಭೆ ಶುಕ್ರವಾರ ನಡೆಯಿತು. ಕಳೆದ ವರ್ಷ ಜೂನ್‌ನಲ್ಲಿ, ರಕ್ಷಣಾ ಸಚಿವಾಲಯವು ಒಆರ್‌ಒಪಿ ಪರಿಷ್ಕರಣೆಗಾಗಿ ವಿಧಾನಗಳನ್ನು ರೂಪಿಸಲು ಒಂದು ಸಮಿತಿಯನ್ನು ರಚಿಸಿತ್ತು. ಈ ಸಮಿತಿಯ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಕ್ಷಣಾ ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಇಂದು ಭಾರತ - ಚೀನಾ 10ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ