ETV Bharat / bharat

ನೈಟ್‌ಕ್ಲಬ್‌ನಲ್ಲಿ ರಾಹುಲ್ ಗಾಂಧಿ ವಿಡಿಯೋ: ಮದುವೆಯಲ್ಲಿ ಭಾಗವಹಿಸುವುದು ಅಪರಾಧವೇ ಎಂದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿದ್ದು, ನೈಟ್​ಕ್ಲಬ್​ನಲ್ಲಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ 'ವಿವಾಹ ಸಮಾರಂಭದಲ್ಲಿ ಭಾಗಿಯಾಗುವುದು, ನಮ್ಮ ದೇಶದಲ್ಲಿ ಅಪರಾಧವಲ್ಲ' ಎಂದು ತಿರುಗೇಟು ನೀಡಿದೆ.

Rahul Gandhi seen at nightclub in viral video
Viral Video: ಕಠ್ಮಂಡುವಿನ ನೈಟ್​ ಕ್ಲಬ್​ನಲ್ಲಿ ರಾಹುಲ್​ಗಾಂಧಿ
author img

By

Published : May 3, 2022, 1:31 PM IST

Updated : May 3, 2022, 1:43 PM IST

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ನೇಹಿತರೊಬ್ಬರ ಆಹ್ವಾನದ ಮೇರೆಗೆ ವಿವಾಹದಲ್ಲಿ ಪಾಲ್ಗೊಳ್ಳಲು ನೇಪಾಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ವರದಿ ಮಾಡಿದ್ದು, ಕಠ್ಮಂಡುವಿನ ನೈಟ್​ಕ್ಲಬ್​ನಲ್ಲಿ ಅವರು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ದೇಶದಲ್ಲಿ ಇನ್ನೂ ಮದುವೆ ಸಮಾರಂಭದಲ್ಲಿ ಭಾಗಿಯಾಗುವುದು ಅಪರಾಧವಾಗಿಲ್ಲ ಎಂದು ಹೇಳಿಕೆ ನೀಡಿದೆ.

ರಾಹುಲ್ ಗಾಂಧಿ ಅವರು ಪತ್ರಕರ್ತರಾಗಿರುವ ಸ್ನೇಹಿತನ ಖಾಸಗಿ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ನೇಪಾಳಕ್ಕೆ ಹೋಗಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ಇನ್ನೂ ಅಪರಾಧವಾಗಿಲ್ಲ. ಬಹುಶಃ ಇಂದಿನಿಂದ ಮದುವೆಗೆ ಹಾಜರಾಗುವುದು ಕಾನೂನುಬಾಹಿರ ಮತ್ತು ಸ್ನೇಹಿತರನ್ನು ಹೊಂದುವುದು ಅಪರಾಧ ಎಂದು ಬಿಜೆಪಿ ನಿರ್ಧರಿಸಬಹುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ.

  • Regular Parties, Vacations, Holidays, Pleasure Trips, Private Foreign Visits etc are nothing new to the nation now.
    As a private citizen there's no issue at all but when an MP, a permanent boss of a national political party who keeps preaching others..... https://t.co/r7bgkmHmvT

    — Kiren Rijiju (@KirenRijiju) May 3, 2022 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ರಾಹುಲ್ ಗಾಂಧಿಯವರು ಪೂರ್ಣ ಸಮಯದ ಪ್ರವಾಸಿ ಮತ್ತು ಅರೆಕಾಲಿಕ ರಾಜಕಾರಣಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಈ ವಿಡಿಯೋವನ್ನು ಕೆಲವು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 2047 ರ ವೇಳೆಗೆ ಭಾರತದ ಕಟ್ಟ ಕಡೆಯ ಮಗುವೂ ಸುರಕ್ಷಿತವಾಗಿರುತ್ತದೆ ಮತ್ತು ಶಿಕ್ಷಣ ಪಡೆಯುತ್ತದೆ : ಕೈಲಾಶ್ ಸತ್ಯಾರ್ಥಿ

Last Updated : May 3, 2022, 1:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.