ನವದೆಹಲಿ: ಕೊರೊನಾ ವೈರಸ್ನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಲ್ಲಿ ರೋಗಿಗಳಿಗೆ ಅನಿವಾರ್ಯವಾಗಿ ಬೇಕಾದ ಆಮ್ಲಜನಕದ ಸಿಲಿಂಡರ್ಗಳು ಮತ್ತು ಐಸಿಯು ಬೆಡ್ ಕೊರತೆಯುಂಟಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಕಿಡಿಕಾರಿದ್ದಾರೆ.
ಮೋದಿ ನಿರ್ಲ್ಯಕ್ಷವೇ ಸಾವಿರಾರು ಮಂದಿಯ ನಿತ್ಯ ಸಾವಿಗೆ ಕಾರಣ ಎಂದು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈಗಾಗಲೇ ದೇಶದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 3,32,730 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,62,63,695ಕ್ಕೆ ಏರಿದೆ. 2,263 ಮಂದಿ ಒಂದೇ ದಿನದಲ್ಲಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,86,920ಕ್ಕೆ ಏರಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616 ಮತ್ತು ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 1,36,48,159ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 31,47,782 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಲಸಿಕೆಗಳನ್ನು ದೇಶದಲ್ಲಿ ನೀಡಲಾಗಿದ್ದು, ನಂತರ ಒಟ್ಟು ವ್ಯಾಕ್ಸಿನೇಷನ್ ಸಂಖ್ಯೆ 13,54,78,420ಕ್ಕೆ ಏರಿದೆ.