ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆಗಳ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಕರೆದಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ಅವರು ಏನು ಮಾಡಿದ್ದಾರೆ?, ತಮ್ಮ ಸ್ನೇಹಿತರ ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿ, ರೈತರ ಆದಾಯವನ್ನು ಅರ್ಧದಷ್ಟು ಕಡಿಮೆ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
-
कहा- किसान की आय दुगनी होगी।
— Rahul Gandhi (@RahulGandhi) December 2, 2020 " class="align-text-top noRightClick twitterSection" data="
किया- ‘मित्रों’ की आय हुई चौगुनी और किसान की होगी आधी।
झूठ की, लूट की, सूट-बूट की सरकार। pic.twitter.com/anSiQ8Zird
">कहा- किसान की आय दुगनी होगी।
— Rahul Gandhi (@RahulGandhi) December 2, 2020
किया- ‘मित्रों’ की आय हुई चौगुनी और किसान की होगी आधी।
झूठ की, लूट की, सूट-बूट की सरकार। pic.twitter.com/anSiQ8Zirdकहा- किसान की आय दुगनी होगी।
— Rahul Gandhi (@RahulGandhi) December 2, 2020
किया- ‘मित्रों’ की आय हुई चौगुनी और किसान की होगी आधी।
झूठ की, लूट की, सूट-बूट की सरकार। pic.twitter.com/anSiQ8Zird
ಕಳೆದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ನೂತನ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಮುಂದಾಯಿತು. ಆದರೆ ರೈತರು ಕೇಂದ್ರದ ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಪ್ರತಿಭಟನೆ ಮುಂದುವರೆಸಿದ್ದಾರೆ.
ಓದಿ: ಬೀದಿಯಲ್ಲಿ ಕುಳಿತು ಅನ್ನದಾತರು ಪ್ರತಿಭಟನೆ, ಟಿವಿಯಲ್ಲಿ ಸುಳ್ಳಿನ ಭಾಷಣ: ಮೋದಿ ವಿರುದ್ಧ ರಾಹುಲ್ ವ್ಯಂಗ್ಯ