ನವದೆಹಲಿ: ಅರುಣಾಚಲ ಪ್ರದೇಶದ ಮೂಲದ ಯುವಕನನ್ನು ಚೀನಾದ ಸೇನೆ ಅಪಹರಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋತ್ಸವಕ್ಕೆ ಮುನ್ನ ಚೀನಾ ಸೇನೆ ಭಾರತೀಯ ವ್ಯಕ್ತಿಯನ್ನು ಅಪಹರಿಸಿದೆ. ಆದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅಪಹರಣಕ್ಕೆ ಒಳಗಾದ ವ್ಯಕ್ತಿಯ ಕುಟುಂಬದೊಂದಿಗೆ ಇದ್ದೇವೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ.
-
गणतंत्र दिवस से कुछ दिन पहले भारत के एक भाग्य विधाता का चीन ने अपहरण किया है- हम मीराम तारौन के परिवार के साथ हैं और उम्मीद नहीं छोड़ेंगे, हार नहीं मानेंगे।
— Rahul Gandhi (@RahulGandhi) January 20, 2022 " class="align-text-top noRightClick twitterSection" data="
PM की बुज़दिल चुप्पी ही उनका बयान है- उन्हें फ़र्क़ नहीं पड़ता!
">गणतंत्र दिवस से कुछ दिन पहले भारत के एक भाग्य विधाता का चीन ने अपहरण किया है- हम मीराम तारौन के परिवार के साथ हैं और उम्मीद नहीं छोड़ेंगे, हार नहीं मानेंगे।
— Rahul Gandhi (@RahulGandhi) January 20, 2022
PM की बुज़दिल चुप्पी ही उनका बयान है- उन्हें फ़र्क़ नहीं पड़ता!गणतंत्र दिवस से कुछ दिन पहले भारत के एक भाग्य विधाता का चीन ने अपहरण किया है- हम मीराम तारौन के परिवार के साथ हैं और उम्मीद नहीं छोड़ेंगे, हार नहीं मानेंगे।
— Rahul Gandhi (@RahulGandhi) January 20, 2022
PM की बुज़दिल चुप्पी ही उनका बयान है- उन्हें फ़र्क़ नहीं पड़ता!
ಪೂರ್ವ ಅರುಣಾಚಲ ಪ್ರದೇಶದ ಸಂಸದ ತಾಪಿರ್ ಗಾವೊ ಈ ರೀತಿ ಆರೋಪ ಮಾಡಿದ್ದು, ಚೀನಾದ ವಶದಲ್ಲಿರುವ ವ್ಯಕ್ತಿಯನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಸ್ಯಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದಲ್ಲಿ ಚೀನಾದ ಸೇನೆ 17 ವರ್ಷದ ಯುವಕ ಮಿರಾಮ್ ಟ್ಯಾರೋನ್ನನ್ನು ಅಪಹರಿಸಿದ್ದು, ಚೀನಾ ಸೇನೆಯಿಂದ ತಪ್ಪಿಸಿಕೊಂಡು ಬಂದ ಯುವಕ ಸ್ನೇಹಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನು.
ಇದನ್ನೂ ಓದಿ: ಅರುಣಾಚಲ ಪ್ರದೇಶದಿಂದ ಯುವಕನನ್ನು ಚೀನಾ ಸೇನೆ ಅಪಹರಿಸಿದೆ : ಸಂಸದ ತಾಪಿರ್ ಗಾವೋ