ನವದೆಹಲಿ: ಪಂಜಾಬ್ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ 117 ಪಕ್ಷದ ಅಭ್ಯರ್ಥಿಗಳೊಂದಿಗೆ ರಾಹುಲ್ ಗಾಂಧಿ ಇಂದು ಅಮೃತಸರ ಮತ್ತು ಜಲಂಧರ್‌ಗೆ ಭೇಟಿ ನೀಡಲಿದ್ದಾರೆ.
ಈ ಮೂಲಕ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೂ ಮುನ್ನ ಕಾಂಗ್ರೆಸ್ ಶಕ್ತಿ, ಒಗ್ಗಟ್ಟು ಪ್ರದರ್ಶನಕ್ಕೆ ರಾಹುಲ್ ಗಾಂಧಿ ಮುಂದಾಗಿದ್ದಾರೆ.
117 ಅಭ್ಯರ್ಥಿಗಳೊಂದಿಗೆ ಶ್ರೀ ಹರ್ಮಂದಿರ್ ಸಾಹಿಬ್‌ನಲ್ಲಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದುರ್ಗಿಯಾನ ಮಂದಿರದಲ್ಲಿ ಮತ್ತು 11 ಗಂಟೆಗೆ ಭಗವಾನ್ ವಾಲ್ಮೀಕಿ ತೀರ್ಥಸ್ಥಳದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 12 ಗಂಟೆಗೆ ರಸ್ತೆ ಮಾರ್ಗದ ಮೂಲಕ ಜಲಂಧರ್‌ಗೆ ಪ್ರಯಾಣಿಸಲಿದ್ದಾರೆ. ಜಲಂಧರ್‌ನ ಮಿಥಾಪುರದ ವೈಟ್ ಡೈಮಂಡ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ವರ್ಚುವಲ್ ರ್ಯಾಲಿ 'ನವಿ ಸೋಚ್ ನವ ಪಂಜಾಬ್' ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ನೀಡಲು ಭಾರತ ಬದ್ಧ: ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ
ನಾಯಕ ರಾಹುಲ್ ಗಾಂಧಿ ಅವರು ಜನವರಿ 27 ರಂದು ಪಂಜಾಬ್‌ಗೆ ಭೇಟಿ ನೀಡುತ್ತಿದ್ದಾರೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಪಂಜಾಬ್‌ನಲ್ಲಿ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಮಂಗಳವಾರ ಟ್ವೀಟ್ ಮಾಡಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ