ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್ನೇಮ್ ಕುರಿತಾಗಿ ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲು ಮಾಡುವ ಉದ್ದೇಶದಿಂದ ಇಂದು ಕೋರ್ಟ್ ಮುಂದೆ ರಾಗಾ ಹಾಜರಾಗುವ ಸಾಧ್ಯತೆ ಇದೆ.
ಸೂರತ್‍ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮಧ್ಯಾಹ್ನ 3ರಿಂದ 6ರವರೆಗೆ ಕೋರ್ಟ್ ಮುಂದೆ ರಾಹುಲ್ ಹಾಜರಾಗುವ ಸಾಧ್ಯತೆ ಇದೆ ಎಂದು ಅವರ ಪರ ವಕೀಲರಾದ ಕಿರೀತ್ ಪನ್ವಾಲಾ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ಖುದ್ದಾಗಿ ರಾಹುಲ್ ಗಾಂಧಿಗೆ ಮೌಖಿಕ ಸೂಚನೆ ಸಹ ನೀಡಿದೆ.
ಇದನ್ನೂ ಓದಿರಿ: ಪುತ್ರನಿಗೆ ಜಾಮೀನು ಸಿಗುತ್ತಿದ್ದಂತೆ ವಕೀಲರನ್ನ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಾರುಖ್!
ಏನಿದು ಪ್ರಕರಣ?
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರು ಕಳ್ಳರಾಗಿ ತಪ್ಪು ಮಾಡಿದ್ದಾರೆ. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎ.ಎನ್. ಧವೆ ರಾಹುಲ್ ಗಾಂಧಿ ಖುದ್ದು ಕೋರ್ಟ್ಗೆ ಹಾಜರಾಗಿ ಹೇಳಿಕೆ ದಾಖಲು ಮಾಡುವಂತೆ ಸೂಚನೆ ನೀಡಿದ್ದಾರೆ.