ETV Bharat / bharat

Lok Sabha polls: ರಾಹುಲ್ ಗಾಂಧಿ ಪ್ರತಿಪಕ್ಷ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ: ಪ್ರದೀಪ್ ಭಟ್ಟಾಚಾರ್ಯ - ಸಂಸದ ಪ್ರದೀಪ್ ಭಟ್ಟಾಚಾರ್ಯ

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರತಿಪಕ್ಷಗಳ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

Rahul Gandhi
ರಾಹುಲ್ ಗಾಂಧಿ
author img

By

Published : Aug 7, 2023, 9:38 AM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): 'ಮೋದಿ ಉಪನಾಮ' ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಇದು ಕಾಂಗ್ರೆಸ್ ಪಕ್ಷದ ರಾಜಕೀಯ ಮಹತ್ವಾಕಾಂಕ್ಷೆಗಳಿಗೆ ಹೊಸ ಜೀವ ತುಂಬಿದೆ. ಕಾನೂನಾತ್ಮಕ ಅಡಚಣೆಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವುದರೊಂದಿಗೆ, ಕಾಂಗ್ರೆಸ್ ಈಗ 'ಇಂಡಿಯಾ' ಮೈತ್ರಿ ಕೂಟದೊಳಗೆ ಪ್ರಬಲ ಸ್ಥಾನದಲ್ಲಿ ಕಂಡುಕೊಳ್ಳುತ್ತಿದೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನಾಗಿ ಬಿಂಬಿಸುತ್ತಿದೆ.

ಭಾನುವಾರ, ಪಶ್ಚಿಮ ಬಂಗಾಳದ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ಭಟ್ಟಾಚಾರ್ಯ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷದ ನಾಯಕ ಎಂದು ಹೇಳಿದ್ದಾರೆ. "ರಾಹುಲ್ ಗಾಂಧಿ ಒಬ್ಬ ಧೀಮಂತ ನಾಯಕ. ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ಧೈರ್ಯದಿಂದ ಎದುರಿಸಿದ್ದಾರೆ. ಬಿಜೆಪಿ ಅವರಿಗೆ ಕಿರುಕುಳ ನೀಡಲು ಪ್ರಯತ್ನಿಸಿತು. ಆದರೆ, ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ವಿಧಿಸಿದ ಶಿಕ್ಷೆಗೆ ತಡೆ ನೀಡಿದೆ. ಶೀಘ್ರದಲ್ಲೇ ಹೊಸ ರಾಜಕೀಯ ಅಧ್ಯಾಯವನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಬರೆಯಲಾಗುವುದು. ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಪ್ರತಿಪಕ್ಷದ ನಾಯಕನಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Modi Surname case: ಸತ್ಯಕ್ಕೆ ಯಾವತ್ತಿದ್ರೂ ಜಯ- ರಾಹುಲ್​ ಗಾಂಧಿ; 'ಇಂಡಿಯಾ' ಮೈತ್ರಿ ಸಂಕಲ್ಪಕ್ಕೆ ಬಲ- ಮಮತಾ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಪ್ರದೀಪ್ ಭಟ್ಟಾಚಾರ್ಯ, ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಹೇಳುವುದು ತಪ್ಪು. ಕಳೆದ 70 ವರ್ಷಗಳಲ್ಲಿ ಏನನ್ನೂ ಮಾಡಿಲ್ಲ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಪ್ರಧಾನಿ ಮೋದಿ ಗುಜರಾತ್‌ನಿಂದ ದೆಹಲಿಗೆ ಬಂದಾಗ ಅವರು ಎತ್ತಿನ ಬಂಡಿಯಲ್ಲಿ ಪ್ರಯಾಣ ಬೆಳೆಸಿದ್ದಾರಾ?. ಕಾಂಗ್ರೆಸ್ ದೇಶದ ಆಡಳಿತದ ಹಿಡಿತವನ್ನು ತೆಗೆದುಕೊಂಡಾಗ, ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿತ್ತು. ದೇಶವನ್ನು ಪುನರ್‌ ನಿರ್ಮಾಣ ಮಾಡುವ ಯೋಜನೆಗಳ ಬಗ್ಗೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದು ಕಾಂಗ್ರೆಸ್. ಹಾಗಾಗಿ, ಕಾಂಗ್ರೆಸ್ ಆಡಳಿತದಲ್ಲಿ ಏನನ್ನೂ ಮಾಡಿಲ್ಲ ಎಂದು ಪ್ರಧಾನಿ ಹೇಳುವುದು ಸಂಪೂರ್ಣವಾಗಿ ತಪ್ಪು ಎಂದರು.

ಸೋಮವಾರ ರಾಜ್ಯಸಭೆಯಲ್ಲಿ ದೆಹಲಿ ಸೇವೆಗಳ ಮಸೂದೆ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಪರಿಚಯಿಸುವ ಮೊದಲು, ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಬದಲಿಸುವ ಕರಡು ಕಾನೂನನ್ನು ತಮ್ಮ ಪಕ್ಷವು ವಿರೋಧಿಸುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು. ಇನ್ನು ಈ ಹಿಂದೆ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಪತ್ರಿಕ್ರಿಯಿಸಿದ ಭಟ್ಟಾಚಾರ್ಯ ಅವರು "ಪ್ರಧಾನಿ ಹೊಸ ಸಂಸತ್ ಕಟ್ಟಡವನ್ನು ಏಕೆ ಉದ್ಘಾಟಿಸಬೇಕಾಗಿತ್ತು?. ಅದನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕಿತ್ತು. ಇದು ಅತ್ಯಂತ ದುರದೃಷ್ಟಕರ ಎಂದರು.

ಇದನ್ನೂ ಓದಿ: Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.