ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡಿ ಮುಂದೆ ಹಾಜರಾಗಿದ್ದು, ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯಕ್ಕೆ ಮೆರವಣಿಗೆ ತೆರಳುವ ಮುನ್ನ ದೆಹಲಿಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ 'ರಾಹುಲ್ ಗಾಂಧಿ ಜಿಂದಾಬಾದ್, ಜಿಂದಾಬಾದ್' ಹಾಡು ಪ್ರತಿಧ್ವನಿಸುತ್ತಿದೆ.
ಪಕ್ಷದ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಸಂಸದರು ಇಡಿ ಕಚೇರಿಯ ಹೊರಗೆ 'ಸತ್ಯಾಗ್ರಹ' ನಡೆಸಲಿದ್ದಾರೆ ಮತ್ತು ತನಿಖಾ ಸಂಸ್ಥೆಯ ಪ್ರಧಾನ ಕಚೇರಿಗೆ ಮೆರವಣಿಗೆ ನಡೆಸಲಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಸೇರಿದಂತೆ ಕೆಲವು ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿವರೆಗೆ ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್ ರ‍್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆಯಲಾಗಿದ್ದು, ಎಐಸಿಸಿ ಕಚೇರಿ ಸುತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರ ರ‍್ಯಾಲಿಗೆ ಪೊಲೀಸರ ತಡೆ: ಎಐಸಿಸಿ ಕಚೇರಿ ಹೊರಗಡೆ ಕಾರ್ಯಕರ್ತರ ಬಂಧನ