ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂದಿಸಿದಂತೆ ನಾಲ್ಕನೇ ದಿನದ ವಿಚಾರಣೆ ಬಳಿಕವೂ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ಇಂದು ವಿಚಾರಣೆಗಾಗಿ ಹಾಜರಾಗಲು ತಿಳಿಸಿದೆ. ರಾಹುಲ್ ಗಾಂಧಿ ಅವರನ್ನು 4 ದಿನಗಳಲ್ಲಿ ಸುಮಾರು 40 ಗಂಟೆಗೂ ಹೆಚ್ಚು ಕಾಲ ವಿಚಾರಣೆ ಮಾಡಲಾಗಿದೆ.
ಕಳೆದ ವಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸತತ ಮೂರು ದಿನಗಳ ವಿಚಾರಣೆಯ ನಂತರ, ಇಡಿ ಸೋಮವಾರ ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿತು. ಬಳಿಕ ಮಂಗಳವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
-
National Herald case: ED quizzes Rahul Gandhi for around 14 hrs, asks him to join probe again today
— ANI Digital (@ani_digital) June 20, 2022 " class="align-text-top noRightClick twitterSection" data="
Read @ANI Story | https://t.co/YV2ST3qyKx#NationalHeraldCase #RahulGandhi pic.twitter.com/XiFxWQ0BFI
">National Herald case: ED quizzes Rahul Gandhi for around 14 hrs, asks him to join probe again today
— ANI Digital (@ani_digital) June 20, 2022
Read @ANI Story | https://t.co/YV2ST3qyKx#NationalHeraldCase #RahulGandhi pic.twitter.com/XiFxWQ0BFINational Herald case: ED quizzes Rahul Gandhi for around 14 hrs, asks him to join probe again today
— ANI Digital (@ani_digital) June 20, 2022
Read @ANI Story | https://t.co/YV2ST3qyKx#NationalHeraldCase #RahulGandhi pic.twitter.com/XiFxWQ0BFI
ಇಂದು ರಾಹುಲ್ ಗಾಂಧಿ ವಿಚಾರಣೆ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೋಮವಾರ ಮಧ್ಯಾಹ್ನ 3.30ರ ಸುಮಾರಿಗೆ ಇಡಿ ಕಚೇರಿಯಿಂದ ಊಟಕ್ಕೆ ತೆರಳಿದ ರಾಹುಲ್ ಗಾಂಧಿ, ಸುಮಾರು ಒಂದು ಗಂಟೆಯ ನಂತರ ಮತ್ತೆ ಇಡಿ ವಿಚಾರಣೆಗೆ ಭಾಗಿಯಾದರು.
ದೆಹಲಿ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಪ್ರಧಾನ ಕಚೇರಿಗೆ ಸೋಮವಾರ ಬೆಳಗ್ಗೆ 11:05ರ ಸುಮಾರಿಗೆ ರಾಹುಲ್ ಗಾಂಧಿ ಅವರು ಸಿಆರ್‌ಪಿಎಫ್ ಸಿಬ್ಬಂದಿಯ "ಝಡ್ ಪ್ಲಸ್" ವರ್ಗದ ಭದ್ರತೆಯೊಂದಿಗೆ ತಲುಪಿದ್ದರು. ಈ ನಡುವೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ವಾರ ಸೋಮವಾರ, ಮಂಗಳವಾರ ಮತ್ತು ಬುಧವಾರ ಸತತ ಮೂರು ದಿನಗಳ ಕಾಲ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು 30 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಿದ್ದರು. ಈ ಸಂದರ್ಭದಲ್ಲಿ ಅವರ ಹೇಳಿಕೆಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ.
ಅನಾರೋಗ್ಯದ ಕಾರಣ ವಿಚಾರಣೆಯಿಂದ ವಿನಾಯಿತಿ: ಸೋನಿಯಾ ಗಾಂಧಿ ಅವರು ಕಳೆದ ಶುಕ್ರವಾರವೇ ತನಿಖಾ ಸಂಸ್ಥೆಯ ಮುಂದೆ ಹಾಜರಾಗಬೇಕಿತ್ತು. ಆದರೆ, ಮಾಜಿ ಕಾಂಗ್ರೆಸ್ ಅಧ್ಯಕ್ಷರು ತಮ್ಮ ತಾಯಿ ಸೋನಿಯಾ ಗಾಂಧಿಯವರ ಅನಾರೋಗ್ಯದ ಕಾರಣ ಶುಕ್ರವಾರ (ಜೂ.17) ನಡೆಯಲಿರುವ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಡಿ ತನಿಖಾಧಿಕಾರಿಗೆ ಪತ್ರ ಬರೆದಿದ್ದರು. ಈ ಮನವಿಯನ್ನು ಸ್ವೀಕರಿಸಿದ ಇಡಿ ಜೂ.20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಇದನ್ನೂ ಓದಿ: 4ನೇ ಸುತ್ತಿನ ವಿಚಾರಣೆ: ಇಡಿ ಮುಂದೆ ಹಾಜರಾದ ರಾಹುಲ್ ಗಾಂಧಿ