ETV Bharat / bharat

ರಾಹುಲ್ ಗಾಂಧಿ ದೇಶದ ಮುಜುಗರಕ್ಕೆ ಕಾರಣರಾಗಿದ್ದಾರೆ: ಸಚಿವ ಕಿರಣ್ ರಿಜಿಜು - ರಾಹುಲ್ ಗಾಂಧಿ ದೇಶದ ಮುಜುಗರಕ್ಕೆ ಕಾರಣರಾಗಿದ್ದಾರೆ

ರಾಹುಲ್ ಗಾಂಧಿ ಅವರು ಭಾರತೀಯ ಸೇನೆಯನ್ನು ಅವಮಾನಿಸುವುದಲ್ಲದೇ, ದೇಶದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಮಸ್ಯೆಯಲ್ಲ, ದೇಶದ ಮುಜುಗರಕ್ಕೆ ಕಾರಣರಾಗಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿದರು.

rahul has become a big shame for the country says rijiju
ರಾಹುಲ್ ಗಾಂಧಿ ಅವರು ಭಾರತೀಯ ಸೇನೆಯನ್ನು ಅವಮಾನಿಸುವುದಲ್ಲದೆ, ದೇಶದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಮಸ್ಯೆಯಲ್ಲ, ದೇಶದ ಮುಜುಗರಕ್ಕೆ ಕಾರಣರಾಗಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿದರು
author img

By

Published : Dec 17, 2022, 5:15 PM IST

ನವದೆಹಲಿ: ಚೀನಾ ಸೈನಿಕರೊಂದಿಗಿನ ಘರ್ಷಣೆ ನಂತರ ಕಾನೂನು ಸಚಿವ ಕಿರಣ್ ರಿಜಿಜು ಅವರು ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿರುವ ಯಾಂಗ್ಟ್ಸೆ ಪ್ರದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಕಾನೂನು ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯ ಸೇನೆಯನ್ನು ಅವಮಾನಿಸುತ್ತಿದ್ದಾರೆ ಮಾತ್ರವಲ್ಲದೇ ದೇಶದ ಪ್ರತಿಷ್ಠೆಗೆ ಹಾನಿ ಮಾಡುತ್ತಿದ್ದಾರೆ ಎಂದು ಹೇಳಿದರು, ಈ ಮೂಲಕ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು.

  • "Yangtse area in Tawang, Arunachal Pradesh is fully secured now due to adequate deployment of the brave jawans of Indian Army," tweets Union minister Kiren Rijiju. pic.twitter.com/Zq3IzjJVCm

    — ANI (@ANI) December 17, 2022 " class="align-text-top noRightClick twitterSection" data=" ">

ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ. ಆದರೆ, ಭಾರತ ಸರ್ಕಾರ ನಿದ್ರಿಸುತ್ತಿದೆ ಮತ್ತು ಅಪಾಯವನ್ನು ನಿರ್ಲಕ್ಷಿಸುತ್ತಿದೆ ಎಂದು ರಾಹುಲ್ ಶುಕ್ರವಾರ ಆರೋಪಿಸಿದ್ದರು, ಚೀನಾ 2,000 ಚದರ ಕಿಲೋಮೀಟರ್ ಭಾರತದ ಭೂಪ್ರದೇಶವನ್ನು ಕಿತ್ತುಕೊಂಡಿದೆ, 20 ಭಾರತೀಯ ಸೈನಿಕರನ್ನು ಕೊಂದಿದೆ ಮತ್ತು ಅರುಣಾಚಲ ಪ್ರದೇಶದಲ್ಲಿ ನಮ್ಮ ಯೋಧರನ್ನು ಥಳಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ರಿಜಿಜು ರಾಹುಲ್ ಗಾಂಧಿ ಅವರು ಭಾರತೀಯ ಸೇನೆಯನ್ನು ಅವಮಾನಿಸುವುದಲ್ಲದೇ, ದೇಶದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಮಸ್ಯೆಯಲ್ಲ, ದೇಶದ ಮುಜುಗರಕ್ಕೆ ಕಾರಣರಾಗಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಜನರು ಹೆಮ್ಮೆಪಡುತ್ತಾರೆ ಎಂದು ಅರುಣಾಚಲ ಪ್ರದೇಶದ ಸಂಸದ ರಿಜಿಜು ಹೇಳಿದರು.

ಇದನ್ನೂ ಓದಿ:ತವಾಂಗ್​ನಲ್ಲಿ ಭಾರತೀಯ ಸೇನೆಯ ತೋರಿದ ಧೈರ್ಯ, ಶೌರ್ಯವನ್ನು ಎಷ್ಟು ಪ್ರಶಂಸಿದರೂ ಕಡಿಮೆ; ರಾಜನಾಥ್​ ಸಿಂಗ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.