ETV Bharat / bharat

ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಯೋಗಿ ಸರ್ಕಾರದ ವಿರುದ್ಧ ರಾಹುಲ್​, ಪ್ರಿಯಾಂಕಾ ವಾಗ್ದಾಳಿ

ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ವಿಚಾರವಾಗಿ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದು, ಯೋಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rahul, Priyanka
Rahul, Priyanka
author img

By

Published : Jul 10, 2021, 2:50 PM IST

ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ವಿಚಾರವಾಗಿ ಕಾಂಗ್ರೆಸ್​​ನ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅಲ್ಲಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮಹಿಳೆಯೋರ್ವಳು ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ವೇಳೆ ಆಕೆಯ ಸೀರೆ ಎಳೆದು ಅನುಚಿತವಾಗಿ ವರ್ತಿಸಲಾಗಿತ್ತು. ಇದೇ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಂಸಾಚಾರವನ್ನ 'ಮಾಸ್ಟರ್​ಸ್ಟ್ರೋಕ್'​ ಎಂದು ನಾಮಕರಣ ಮಾಡಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ್ದಾರೆ.

  • उत्तर प्रदेश में ‘हिंसा’ का नाम बदलकर ‘मास्टरस्ट्रोक’ रख दिया गया है। pic.twitter.com/poT0aOxxBD

    — Rahul Gandhi (@RahulGandhi) July 10, 2021 " class="align-text-top noRightClick twitterSection" data=" ">

ಉತ್ತರ ಪ್ರದೇಶ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಹಿಳೆಯರು ನಾಮಪತ್ರ ಸಲ್ಲಿಕೆಯನ್ನ ತಡೆಯಲು ಬಿಜೆಪಿ ಎಲ್ಲ ರೀತಿಯಿಂದಲೂ ಮೀತಿ ಮೀರುತ್ತಿದೆ ಎಂದಿದ್ದಾರೆ. ಜತೆಗೆ ಕಳೆದ ಐದು ವರ್ಷಗಳ ಹಿಂದೆ ಮಹಿಳೆಯೋರ್ವಳು ಅತ್ಯಾಚಾರಕ್ಕೊಳಗಾದ ಸಂದರ್ಭದಲ್ಲಿ ಬಿಜೆಪಿ ಶಾಸಕನೋರ್ವ ಸಂತ್ರಸ್ತೆಯ ಕುಟುಂಬ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೀಗ ಮಹಿಳೆಯೋರ್ವರು ನಾಮಪತ್ರ ಸಲ್ಲಿಕೆ ತಡೆಯಲು ಈ ರೀತಿಯಾಗಿ ನಡೆದುಕೊಂಡಿದೆ ಎಂದಿದ್ದಾರೆ.

  • कुछ सालों पहले एक बलात्कार पीड़िता ने भाजपा विधायक के खिलाफ आवाज उठाई थी, उसे व उसके परिवार को मारने की कोशिश की गई थी।

    आज एक महिला का नामांकन रोकने के लिए भाजपा ने सारी हदें पार कर दीं।

    सरकार वही।
    व्यवहार वही। pic.twitter.com/rTcGQiG3Ai

    — Priyanka Gandhi Vadra (@priyankagandhi) July 10, 2021 " class="align-text-top noRightClick twitterSection" data=" ">

ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಈ ಅಮಾನವೀಯ ಘಟನೆಯ ವಿಡಿಯೋವನ್ನು ಟ್ವೀಟ್​ ಮಾಡಿದ್ದರು. 'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೂಂಡಾಗಳು ಚುನಾವಣೆ ಗೆಲ್ಲಲು ಮಹಿಳೆಗೆ ಅವಮಾನ ಮಾಡಿದ್ದಾರೆ' ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ಬ್ಲಾಕ್​ ಪ್ರಮುಖ್​ ಚುನಾವಣೆ : ನಾಮಪತ್ರ ಸಲ್ಲಿಸಲು ಬಂದಿದ್ದ ಮಹಿಳೆಯ ಸೀರೆ ಎಳೆದಾಡಿದ ದುಶ್ಯಾಸನರು!

ಉತ್ತರ ಪ್ರದೇಶದ 476 ಪಂಚಾಯ್ತಿ ಮುಖ್ಯಸ್ಥರ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದ್ದು, ರಾತ್ರಿ ವೇಳಗೆ ಫಲಿತಾಂಶ ಸಹ ಬಹಿರಂಗಗೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.