ETV Bharat / bharat

ಸೆ.9 ರಿಂದ ಜಮ್ಮು- ಕಾಶ್ಮೀರ ಪ್ರವಾಸ ಕೈಗೊಳ್ಳಲಿರುವ ರಾಹುಲ್​ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್ 9 ರಂದು ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಪಕ್ಷದ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Rahul
ರಾಹುಲ್​ ಗಾಂಧಿ
author img

By

Published : Sep 6, 2021, 10:30 AM IST

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್ 9 ರಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಪಕ್ಷದ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಆರ್ಟಿಕಲ್​ 370 ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಕಳೆದ ತಿಂಗಳು ಗಂದರ್‌ಬಾಲ್ ಜಿಲ್ಲೆಯ ಮಾತಾ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

ಆಗಸ್ಟ್ 9 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದ ರಾಹುಲ್​ ಮಧ್ಯ ಕಾಶ್ಮೀರ ಜಿಲ್ಲೆಯ ತುಲ್ಲಮುಲ್ಲಾ ಪ್ರದೇಶದಲ್ಲಿರುವ ಮಾತಾ ಖೀರ್ ಭವಾನಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇದು ಕಾಶ್ಮೀರಿ ಪಂಡಿತರ ಪವಿತ್ರ ದೇವಾಲಯವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.