ಭುವನೇಶ್ವರ (ಒಡಿಶಾ): ಮಹತ್ವದ ಬೆಳವಣಿಗೆಯಲ್ಲಿ ಒಡಿಶಾ ರೈಲು ದುರಂತದ ಬಗ್ಗೆ ಸಿಬಿಐ (ಕೇಂದ್ರೀಯ ತನಿಖಾ ಸಂಸ್ಥೆ) ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಆಡಳಿತಾತ್ಮಕ ಮಾಹಿತಿಯನ್ನು ಪರಿಗಣನೆಗೆ ಇಟ್ಟುಕೊಂಡು ರೈಲ್ವೆ ಮಂಡಳಿಯು ಈ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಶುಕ್ರವಾರ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಈ ರೈಲು ದುರಂತದಲ್ಲಿ ಕನಿಷ್ಠ 275 ಜನರು ಸಾವನ್ನದ್ದು, 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಮೊದಲು ಘಟನಾ ಸ್ಥಳದಲ್ಲಿ ಮಾತನಾಡಿದ್ದ ಸಚಿವ ಅಶ್ವಿನಿ ವೈಷ್ಣವ್, ರೈಲು ದುರಂತಕ್ಕೆ ಕಾರಣ ಮತ್ತು ಅದಕ್ಕೆ ಕಾರಣವಾದ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಪ್ರಾಥಮಿಕ ತನಿಖಾ ಮಾಹಿತಿ ಪ್ರಕಾರ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್ (ಹಳಿ ಬದಲಿಸುವ ವ್ಯವಸ್ಥೆ) ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದರು. ಅಲ್ಲದೇ, ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ಪೂರ್ಣಗೊಳಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಸಚಿವರು ಹೇಳಿದ್ದರು.
ದುರಂತದಲ್ಲಿ ಗಾಯಗೊಂಡ ಗಾಯಾಳುಗಳು ಬಾಲಸೋರ್, ಕಟಕ್ ಮತ್ತು ಭುವನೇಶ್ವರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಗಾಯಗೊಂಡ ರೋಗಿಗಳಿಗೆ ಚಿಕಿತ್ಸೆಗೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಗಲು-ರಾತ್ರಿ ರೋಗಿಗಳನ್ನು ನೋಡಿಕೊಳ್ಳುವ ವೈದ್ಯರ ತಂಡಗಳಿವೆ."ನಾವು ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
-
#WATCH | Railway Board recommends CBI probe related to #OdishaTrainAccident, announces Railways minister Vaishnaw pic.twitter.com/X9qUs55fZr
— ANI (@ANI) June 4, 2023 " class="align-text-top noRightClick twitterSection" data="
">#WATCH | Railway Board recommends CBI probe related to #OdishaTrainAccident, announces Railways minister Vaishnaw pic.twitter.com/X9qUs55fZr
— ANI (@ANI) June 4, 2023#WATCH | Railway Board recommends CBI probe related to #OdishaTrainAccident, announces Railways minister Vaishnaw pic.twitter.com/X9qUs55fZr
— ANI (@ANI) June 4, 2023
ಇದನ್ನೂ ಓದಿ: ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್ ಸಮಸ್ಯೆಯಿಂದ ರೈಲು ದುರಂತ: ಸಚಿವ ಅಶ್ವಿನಿ ವೈಷ್ಣವ್
ಈ ಭೀಕರ ಅಪಘಾತಕ್ಕೆ ಶಾಲಿಮಾರ್ - ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು - ಹೌರಾ ಸೂಪರ್ ಫಾಸ್ಟ್ ರೈಲು ಮತ್ತು ಗೂಡ್ಸ್ ರೈಲು ಕಾರಣವಾಗಿದೆ. ಈ ಬಗ್ಗೆ ಇಂದು ಬೆಳಗ್ಗೆ ಪ್ರತಿಕ್ರಿಯಿಸಿದ್ದ ರೈಲ್ವೆ ಇಲಾಖೆಯು ಕೋರಮಂಡಲ್ ಎಕ್ಸ್‌ಪ್ರೆಸ್ ಅತಿ ವೇಗದಲ್ಲಿ ಇರಲಿಲ್ಲ. ಆದರೆ, ಗೂಡ್ಸ್ ರೈಲು ನಿಂತಿದ್ದ ಲೂಪ್ ಲೈನ್ಗೆ ಪ್ರವೇಶಿಸಲು ಹಸಿರು ನಿಶಾನೆ ಸ್ವೀಕರಿಸಿತ್ತು ಎಂದು ಹೇಳಿದೆ.
ಮತ್ತೊಂದೆಡೆ, ಇಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತನಾಡಿ, ಈ ದುರಂತದಲ್ಲಿ ಡಿಕ್ಕಿ ನಿಗ್ರಹ ಸಾಧನವಾದ ಕವಚ ಬಗ್ಗೆ ಈ ಹಿಂದೆ ನಾನು ಪ್ರಸ್ತಾಪಿಸಿದ್ದೆ. ಆಗ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಅಶ್ವಿನಿ ವೈಷ್ಣವ್ ನನ್ನನ್ನು ಏಕೆ ವಿರೋಧಿಸಲಿಲ್ಲ?, ನಾನು ರೈಲ್ವೆ ಸಚಿವರ ರಾಜೀನಾಮೆ ಕೇಳುತ್ತಿಲ್ಲ. ಆದರೆ, ಸತ್ಯ ಹೊರಬರಬೇಕೆಂದು ನಾವು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ಈ ಮೊದಲು ದುರಂತದಲ್ಲಿ ಒಟ್ಟು ಸಾವಿನ ಸಂಖ್ಯೆ 288 ಎಂದು ಹೇಳಲಾಗಿತ್ತು. ಇಂದು ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಮಾತನಾಡಿ, ಒಟ್ಟಾರೆ ಮೃತರ 275 ಮಾತ್ರ ಎಂದು ಹೇಳಿದ್ದರು. ಕೆಲವು ದೇಹಗಳನ್ನು ಎರಡು ಬಾರಿ ಎಣಿಸಲಾಗಿತ್ತು. ನಂತರ ಬಾಲಸೋರ್ ಜಿಲ್ಲಾಧಿಕಾರಿಗಳ ವಿವರವಾದ ಪರಿಶೀಲನೆ ಮತ್ತು ವರದಿಯ ನಂತರ ಅಂತಿಮವಾಗಿ ಸಾವಿನ 275 ಆಗಿದೆ ಎಂದು ಮಾಹಿತಿ ನೀಡಿದ್ದರು.
ಇದನ್ನೂ ಓದಿ: ರೈಲು ದುರಂತದಲ್ಲಿ ಮೃತರ ಸಂಖ್ಯೆ 288 ಅಲ್ಲ, 275.. ಗಾಯಗೊಂಡವರು 1,175 ಮಂದಿ: ಒಡಿಶಾ ಸರ್ಕಾರ