ETV Bharat / bharat

ಬಿಹಾರದಲ್ಲಿ ಹಿಂಸಾರೂಪಕ್ಕೆ ತಿರುಗಿದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿಕೆ - ಬಿಹಾರ ರೈಲ್ವೆ ನೇಮಕಾತಿ ಮಂಡಳಿ ವಿರುದ್ಧ ಪ್ರತಿಭಟನೆ

ಬಿಹಾರದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಹಿಂಸಾರೂಪ ಪಡೆದ ಬೆನ್ನಲ್ಲೇ ಎನ್​ಟಿಪಿಸಿ ಹಾಗೂ ಲೆವಲ್​-1 ಪರೀಕ್ಷೆಗಳು ಮುಂದೂಡಲ್ಪಟ್ಟಿವೆ.

DOC Title * railway-exam-postponed-amid-violent-protests-in-bihar
ಹಿಂಸಾರೂಪ ಪಡೆದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ
author img

By

Published : Jan 27, 2022, 3:39 AM IST

ಬಿಹಾರ: ರೈಲ್ವೆ ನೇಮಕಾತಿ ಮಂಡಳಿಯ (RRB) ನಾನ್‌ ಟೆಕ್ನಿಕಲ್‌ ಪಾಪ್ಯುಲರ್‌ ಕೆಟಗರಿ (ಎನ್‌ಟಿಪಿಸಿ) ಹುದ್ದೆಗಳಿಗೆ ನಡೆಸಲು ಯೋಜಿಸಿದ್ದ ಎರಡು ಹಂತದ ಪರೀಕ್ಷಾ ನೀತಿ ವಿರುದ್ಧದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಕಾರಣ, ರೈಲ್ವೆ ಸಚಿವಾಲಯವು ಎನ್​ಟಿಪಿಸಿ ಹಾಗೂ ಮೊದಲ ಹಂತದ ಪರೀಕ್ಷೆಗಳನ್ನು ಮುಂದೂಡಿದೆ.

ಸಚಿವಾಲಯವು ನೋಟಿಸ್ ಹೊರಡಿಸಿದ್ದು, ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಬಗ್ಗೆ ಅರಿತುಕೊಳ್ಳಲು ಉನ್ನತ ಸಮಿತಿ ರಚಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅಹವಾಲು ಮತ್ತು ಸಲಹೆಗಳನ್ನು ಸಮಿತಿಗೆ rrbcommittee@railnet.gov.inನಲ್ಲಿ ಮೂರು ವಾರಗಳೊಳಗೆ ಅಂದರೆ, ಫೆಬ್ರವರಿ 16ರವರೆಗೆ ಸಲ್ಲಿಸಬಹುದು ಎಂದು ತಿಳಿಸಿದೆ.

railway-exam-postponed-amid-violent-protests-in-bihar
ರೈಲಿಗೆ ಬೆಂಕಿ

ರೈಲ್ವೆ ನೇಮಕಾತಿ ಮಂಡಳಿ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಉದ್ರಿಕ್ತ ಉದ್ಯೋಗ ಆಕಾಂಕ್ಷಿಗಳು ಗಯಾದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ್ದರು. ಅಲ್ಲದೆ ಚಲಿಸುತ್ತಿದ್ದ ರೈಲು ಹಾಗೂ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಪ್ರಯಾಗ್‌ರಾಜ್‌ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಸುಮಾರು ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಹಾರದಲ್ಲಿ ಹಿಂಸಾರೂಪ ಪಡೆದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ

ಎರಡು ಹಂತದ ಪರೀಕ್ಷೆಗೆ ವಿರೋಧ: ಪರೀಕ್ಷೆಗಳನ್ನು ಎರಡು ಹಂತಗಳಲ್ಲಿ ನಡೆಸುವ ರೈಲ್ವೆ ಇಲಾಖೆಯ ನಿರ್ಧಾರವನ್ನು ಪ್ರತಿಭಟನಾಕಾರರು ವಿರೋಧಿಸುತ್ತಿದ್ದಾರೆ. ಅಂತಿಮ ಆಯ್ಕೆಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ)ಯನ್ನು ಎದುರಿಸಬೇಕಿದೆ. ಇದು ಆರ್‌ಆರ್‌ಬಿ-ಎನ್‌ಟಿಪಿಸಿಯು ಮೊದಲ ಹಂತದಲ್ಲಿ ಉತ್ತೀರ್ಣರಾದವರಿಗೆ ಎಸಗಿರುವ ವಂಚನೆ ಎಂದು ಆರೋಪಿಸಿದ್ದಾರೆ. 2019ರಲ್ಲಿ ಹೊರಡಿಸಲಾದ ಆರ್‌ಆರ್‌ಬಿ ಅಧಿಸೂಚನೆಯಲ್ಲಿ ಒಂದೇ ಪರೀಕ್ಷೆಯನ್ನು ಉಲ್ಲೇಖಿಸಲಾಗಿತ್ತು. ಆದರೆ ಇದೀಗ ಸರ್ಕಾರವು ತಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಉದ್ಯೋಗಾಕಾಂಕ್ಷಿಗಳು ಆರೋಪಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಮಾತನಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ಉದ್ಯೋಗಾಕಾಂಕ್ಷಿಗಳಲ್ಲಿ ವಿನಂತಿಸಿಸಿದ್ದಾರೆ. ಪ್ರತಿಭಟನಾನಿರತರ ಮನವಿ ಹಾಗೂ ಮತ್ತು ವ್ಯಕ್ತವಾಗಿರುವ ಆತಂಕವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.

ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲಾಗುವುದು. ಸಮಿತಿಯು ಅಭ್ಯರ್ಥಿಗಳ ಪ್ರಾತಿನಿಧ್ಯತೆ ಬಗ್ಗೆ ಪರಿಶೀಲಿಸಲಿದ್ದು, ಮುಖ್ಯಮಂತ್ರಿಗಳು ಸೂಕ್ಷ್ಮವಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಅವರೊಂದಿಗೆ ಸಂಪರ್ಕದಲ್ಲಿದ್ದು, ಅಭ್ಯರ್ಥಿಗಳು ಔಪಚಾರಿಕವಾಗಿ ಕುಂದುಕೊರತೆಗಳನ್ನು ಮುಂದಿಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಸದ್ಯ ಫೆ.15ರಂದು ಆರಂಭವಾಗಬೇಕಿದ್ದ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ)ಯ 2ನೇ ಹಂತ ಹಾಗೂ ಫೆ. 23ರಿಂದ ಆರಂಭವಾಗಬೇಕಿದ್ದ ಮೊದಲ ಹಂತದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.