ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಹಾಗೂ ರೈಲುಗಳಲ್ಲಿ ಸಂಚಾರ ಮಾಡುವಾಗ ಮಾಸ್ಕ್ ಹಾಕದಿದ್ದರೆ 500 ರೂ. ದಂಡ ವಿಧಿಸುವ ನಿಯಮ ಈಗಾಗಲೇ ರೈಲ್ವೆ ಇಲಾಖೆಯಿಂದ ನಿಯಮ ಜಾರಿಯಲ್ಲಿದ್ದು, ಮುಂದಿನ ಆರು ತಿಂಗಳ ಕಾಲ ಈ ಮಾನದಂಡ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಕೇಂದ್ರ ರೈಲ್ವೆ ಇಲಾಖೆಯಿಂದ ಕೋವಿಡ್ ನಿಯಮ ಜಾರಿಯಾಗಿದ್ದ ಸಂದರ್ಭದಲ್ಲಿ ರೈಲ್ವೆ ಪ್ಲಾಟ್ ಫಾರ್ಮ್, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯಗೊಳಿಸಿತ್ತು. ಒಂದು ವೇಳೆ ಈ ನಿಯಮ ಪಾಲನೆ ಮಾಡುವಲ್ಲಿ ವಿಫಲಗೊಂಡರೆ ಅಂತವರಿಗೆ 500 ರೂ. ದಂಡ ವಿಧಿಸಲಾಗುವುದು ಎಂದು ಹೇಳಿತ್ತು. ಈ ನಿಯಮ ರೈಲ್ವೆ ಇಲಾಖೆಯಿಂದ ಮುಂದುವರಿಕೆಯಾಗಲಿದ್ದು, 2022ರ ಏಪ್ರಿಲ್ 17ರವರೆಗೆ ಜಾರಿಯಲ್ಲಿರಲಿದೆ. ಇದರ ಜೊತೆಗೆ ರೈಲ್ವೆ ಸ್ಟೇಷನ್ಗಳಲ್ಲಿ ಉಗುಳುವವರಿಗೆ 500 ರೂ ದಂಡ ವಿಧಿಸುವ ನಿಯಮ ಕೂಡ ಮುಂದುವರೆಯಲಿದೆ.
ಇದನ್ನೂ ಓದಿರಿ: ಬ್ರಿಟಿಷ್ ರಾಜತಾಂತ್ರಿಕರಿಗೆ ಚಂಡೀಗಢದಲ್ಲಿ ಲೈಂಗಿಕ ಕಿರುಕುಳ.. ಪ್ರಕರಣ ದಾಖಲು
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 22,431 ಹೊಸ ಸೋಂಕಿತ ಪ್ರಕರಣ ದಾಖಲಾಗಿದ್ದು, 318 ಜನರು ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿನ (ಕೋವಿಡ್ -19) ವಿರುದ್ಧ ಕೇಂದ್ರ ಕೈಗೊಂಡ ತಡೆಗಟ್ಟುವ ಕ್ರಮಗಳಿಗೆ ಅನುಗುಣವಾಗಿ, ರೈಲುಗಳು ಮತ್ತು ನಿಲ್ದಾಣಗಳ ಆವರಣದಲ್ಲಿ ಫೇಸ್ ಮಾಸ್ಕ್ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಮಾಸ್ಕ್ ಧರಿಸದೇ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಓಡಾಡುವ ಜನರಿಗೆ 500 ರೂ. ದಂಡ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.