ನವದೆಹಲಿ: ಕೇಂದ್ರ ಸರ್ಕಾರ ಬಲಿಷ್ಠವಾದ ನೌಕಾಪಡೆಯನ್ನು ಕಟ್ಟಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಗುರುವಾರ ಕಾರವಾರದ ಸೀಬರ್ಡ್ ನೌಕಾನೆಲೆಗೆ ಭೇಟಿ ನೀಡಿದ ನಂತರ ರಕ್ಷಣಾ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಸೀಬರ್ಡ್ ನೌಕಾನೆಲೆ ಭವಿಷ್ಯದಲ್ಲಿ ಭಾರತದ ಅತಿ ದೊಡ್ಡ ನೌಕಾನೆಲೆಯಾಗಲಿದ್ದು, ಇದು ಹಿಂದೂಮಹಾಸಾಗರದಲ್ಲಿ ಭಾರತೀಯ ನೌಕಾಪಡೆಯ ಕಾರ್ಯಾಚರಣೆಗಳಿಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಮುಂದಿನ ವರ್ಷ ಸ್ವಾತಂತ್ರ್ಯ ದಿನಕ್ಕೆ 75 ವರ್ಷ ತುಂಬಲಿದ್ದು, ಸ್ವದೇಶಿ ಏರ್ಕ್ರಾಫ್ಟ್ ಕ್ಯಾರಿಯರ್ ಮುಂದಿನ ವರ್ಷ ಸೇರ್ಪಡೆ ಮಾಡಲಾಗುತ್ತದೆ ಎಂದು ಅವರು ಹೇಳಿದರು
ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಈಗಲಾದರೂ ಜನರ ಕ್ಷಮೆ ಕೇಳಲಿ; ಸಿಎಂ ಬಿಎಸ್ವೈ
ಭಾರತವು ಸ್ಥಳೀಯ ಉದ್ಯಮವನ್ನು ಬಳಸಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದೆ. ಭಾರತದಲ್ಲಿ ನಿರ್ಮಿಸಲಾಗುತ್ತಿರುವ 44 ಯುದ್ಧನೌಕೆಗಳ ಪೈಕಿ 42 ರಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ. ವಿನ್ಯಾಸ, ನೌಕೆಗಳಲ್ಲಿ ಬಳಸುವ ಉಕ್ಕು, ಶಸ್ತ್ರಾಸ್ತ್ರಗಳನ್ನು 75ರಷ್ಟು ಸ್ಥಳೀಯವಾಗಿ ಬಳಸಿಕೊಳ್ಳಲಾಗಿದೆ. ಈ ಮೂಲಕ ಸ್ವದೇಶಿಯತೆಗೆ ಆದ್ಯತೆ ನೀಡಲಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.