ಜೈಪುರ ( ರಾಜಸ್ಥಾನ) : ಎರಡು ದಿನಗಳ ರಾಜಸ್ಥಾನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಮಧ್ಯೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಿಕರ್‌ನಲ್ಲಿ ನಡೆಯಲಿರುವ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ನಮ್ಮ ಭಾಷಣವನ್ನು ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಕಚೇರಿ (ಪಿಎಂಓ), ಗೆಹ್ಲೋಟ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಅವರಿಗೆ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ರಾಜಸ್ಥಾನ ಸಿಎಂ ಕಚೇರಿ ಮಾಹಿತಿ ನೀಡಿದೆ. ಒಂದು ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾದರೆ ಸ್ವಾಗತ ಕೋರುತ್ತೇವೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಿಕರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗೆಹ್ಲೋಟ್ ಅವರು ತಮ್ಮ ಭಾಷಣದ ಮೂಲಕ ಪ್ರಧಾನಿ ಮೋದಿ ಅವರನ್ನು ಸಾಧ್ಯವಾಗುವುದಿಲ್ಲವಾದ್ದರಿಂದ ಟ್ವೀಟ್ ಮೂಲಕ ರಾಜಸ್ಥಾನಕ್ಕೆ ಮೋದಿಯವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ತಮ್ಮ ಟ್ವೀಟ್ನಲ್ಲಿ "ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ಇಂದು ನೀವು ರಾಜಸ್ಥಾನಕ್ಕೆ ಭೇಟಿ ನೀಡುತ್ತಿರುವಿರಿ. ನಿಮ್ಮ ಕಚೇರಿ ವಿವಿಧ ಕಾರ್ಯಕ್ರಮದಿಂದ ನನ್ನ ಪೂರ್ವ ನಿಗದಿತ ಮೂರು ನಿಮಿಷಗಳ ಭಾಷಣವನ್ನು ತೆಗೆದುಹಾಕಿದೆ. ಆದ್ದರಿಂದ ನಾನು ಭಾಷಣದ ಮೂಲಕ ನಿಮ್ಮನ್ನು ಸ್ವಾಗತಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಟ್ವೀಟ್ ಮೂಲಕ ನಾನು ನಿಮ್ಮನ್ನು ರಾಜಸ್ಥಾನಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ" ಎಂದು ಹೇಳಿದ್ದಾರೆ.
ಇದಲ್ಲದೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿರುವ ಅವರು "ಪ್ರಧಾನಿಗಳು ಆರು ತಿಂಗಳಲ್ಲಿ ಏಳನೇ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ತಮ್ಮ ಬೇಡಿಕೆಗಳನ್ನು ವಿವರಿಸಿದ ಅವರು, ಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಾತಿಗಾಗಿ ನಡೆಸುವ ಅಗ್ನಿವೀರ್ ಯೋಜನೆಯನ್ನು ಹಿಂಪಡೆಯುವಂತೆ ಗೆಹ್ಲೋಟ್ ಒತ್ತಾಯಿಸಿದರು. ರಾಜಸ್ಥಾನ ಸರ್ಕಾರವು 21 ಲಕ್ಷ ರೈತರ 15,000 ಕೋಟಿ ರೂಪಾಯಿ ಮೌಲ್ಯದ ಸಹಕಾರಿ ಬ್ಯಾಂಕ್ ಸಾಲವನ್ನು ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದು ಈ ಬೇಡಿಕೆಯನ್ನು ಪೂರೈಸಬೇಕು ಎಂದು ಮನವಿ ಮಾಡಿದರು. ಅಲ್ಲದೆ ರಾಜಸ್ಥಾನ ವಿಧಾನಸಭೆಯು ಜಾತಿ ಗಣತಿ ನಡೆಸಲು ನಿರ್ಣಯವನ್ನು ಅಂಗೀಕರಿಸಿದೆ ಮತ್ತು ಇದನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಲಾಗಿದೆ ಇದೇ ವೇಳೆ ಹೇಳಿದರು.
ಸಿಕಾರ್ನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇದೇ ವೇಳೆ 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (ಪಿಎಂಕೆಎಸ್‌ಕೆ) ದೇಶಕ್ಕೆ ಸಮರ್ಪಿಸಲಿದ್ದಾರೆ. ಜೊತೆಗೆ "ಯೂರಿಯಾ ಗೋಲ್ಡ್"ನ್ನು ಪ್ರಾರಂಭಿಸಲಿದ್ದಾರೆ. ಮತ್ತು ರಾಜಸ್ಥಾನದ ಉದಯಪುರ, ಬನ್ಸ್ವಾರಾ, ಪ್ರತಾಪ್‌ಗಢ ಮತ್ತು ಡುಂಗರ್‌ಪುರ ಜಿಲ್ಲೆಗಳಲ್ಲಿ ಆರು ಏಕಲವ್ಯ ಮಾದರಿ ವಸತಿ ಶಾಲೆ, ಮತ್ತು ಜೋಧಪುರದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಮೋದಿ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ : PM Modi: ಬಿಜೆಪಿಯ 3ನೇ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಒಂದಾಗಲಿದೆ: ಮೋದಿ ಭರವಸೆ