ETV Bharat / bharat

ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಸಮೀಕ್ಷೆಗೆ ನಿರ್ಧಾರ: ಆದೇಶ ಹೊರಡಿಸಿದ ಗೆಹ್ಲೋಟ್‌ ಸರ್ಕಾರ - ಬಿಹಾರದಲ್ಲಿ ಜಾತಿ ಸಮೀಕ್ಷೆ

ಬಿಹಾರದಂತೆ ಈಗ ರಾಜಸ್ಥಾನದಲ್ಲೂ ಜಾತಿ ಆಧಾರಿತ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರ ಆದೇಶ ಹೊರಡಿಸಿದೆ.

caste survey
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
author img

By PTI

Published : Oct 8, 2023, 7:03 AM IST

ಜೈಪುರ (ರಾಜಸ್ಥಾನ) : ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಈಗಾಗಲೇ ತಯಾರಿ ಪ್ರಾರಂಭಿಸಿವೆ. ಇದರ ನಡುವೆ ರಾಜ್ಯದಲ್ಲಿ ಜಾತಿವಾರು ಸಮೀಕ್ಷೆ ನಡೆಸಲು ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಶನಿವಾರ ಆದೇಶ ಮಾಡಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆಯ ಫಲಿತಾಂಶಗಳನ್ನು ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ಆದೇಶಿಸಿದ್ದು, ಸರ್ಕಾರ ತನ್ನದೇ ಆದ ಸಂಪನ್ಮೂಲದಿಂದ ಸಮೀಕ್ಷೆ ಕೈಗೊಳ್ಳಲಿದೆ. ರಾಜ್ಯ ಸಚಿವ ಸಂಪುಟದ ಒಪ್ಪಿಗೆಯ ಬಳಿಕ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಈ ಆದೇಶ ಹೊರಡಿಸಿದೆ. ರಾಜಸ್ಥಾನ ಜಾತಿವಾರು ಜನಸಂಖ್ಯೆಯ ಎಣಿಕೆ ನಡೆಸುವ ದೇಶದ ಎರಡನೇ ರಾಜ್ಯವಾಗಲಿದೆ.

ರಾಜಸ್ಥಾನ ಸರ್ಕಾರ ಹೊರಡಿಸಿದ ಆದೇಶದ ಮುಖ್ಯಾಂಶಗಳು:

1. ರಾಜ್ಯ ಸರ್ಕಾರ ತನ್ನ ಸ್ವಂತ ಸಂಪನ್ಮೂಲಗಳಿಂದ ಜಾತಿ ಆಧಾರಿತ ಸಮೀಕ್ಷೆ ನಡೆಸುತ್ತದೆ.

2. ಈ ಸಮೀಕ್ಷೆಯ ಮೂಲಕ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮಟ್ಟಕ್ಕೆ ಸಂಬಂಧಿಸಿದಂತೆ ನವೀಕರಿಸಿದ ಮಾಹಿತಿ ಮತ್ತು ದತ್ತಾಂಶ ಸಂಗ್ರಹಿಸಲಾಗುತ್ತದೆ. ಇದನ್ನು ಯೋಜನೆ (ಆರ್ಥಿಕ ಮತ್ತು ಅಂಕಿಅಂಶ) ಇಲಾಖೆ ನಿರ್ವಹಿಸಲಿದೆ. ಇದಕ್ಕಾಗಿ ಯೋಜನಾ (ಆರ್ಥಿಕ ಮತ್ತು ಅಂಕಿಅಂಶ) ಇಲಾಖೆ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತದೆ.

3. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ನೋಡಲ್ ಅಧಿಕಾರಿಯಾಗಿರುತ್ತಾರೆ. ಹಾಗೆಯೇ ಒಟ್ಟಾರೆ ಉಸ್ತುವಾರಿ ನೀಡಲಾಗಿದೆ.

4. ಜಿಲ್ಲಾಧಿಕಾರಿಗಳು ಈ ಕೆಲಸಕ್ಕಾಗಿ ಪುರಸಭೆ, ನಗರ ಸಭೆ, ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಹಾಯ ಪಡೆಯಲಿದ್ದಾರೆ.

5. ಸಮೀಕ್ಷಾ ಕಾರ್ಯಕ್ಕಾಗಿ ನೋಡಲ್ ಇಲಾಖೆಯಿಂದ ಪ್ರಶ್ನಾವಳಿ ತಯಾರಿಸಲಾಗುವುದು ಮತ್ತು ಯಾವ ಮಾಹಿತಿಯನ್ನು ಸಂಗ್ರಹಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಎಲ್ಲಾ ವಿಷಯಗಳನ್ನು ಆ ಪ್ರಶ್ನಾವಳಿಯಲ್ಲಿ ಉಲ್ಲೇಖಿಸಲಾಗುತ್ತದೆ. ಹಾಗಾಗಿ, ಎಲ್ಲಾ ಅಂಶಗಳನ್ನು ಪ್ರಶ್ನಾವಳಿಯಲ್ಲಿ ಎಚ್ಚರಿಕೆಯಿಂದ ಸೇರಿಸಬೇಕು, ಆ ಮೂಲಕ ಪ್ರತಿ ವ್ಯಕ್ತಿಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.

6. ಸಮೀಕ್ಷೆಯಿಂದ ಪಡೆದ ಮಾಹಿತಿ ಮತ್ತು ದತ್ತಾಂಶವನ್ನು ಆನ್‌ಲೈನ್‌ನಲ್ಲಿ ಫೀಡ್ ಮಾಡಬೇಕಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ವಿಶೇಷ ಸಾಫ್ಟ್‌ವೇರ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ರಚಿಸುತ್ತದೆ. ಸಮೀಕ್ಷೆಯಿಂದ ಸಂಗ್ರಹಿಸಿದ ಎಲ್ಲಾ ಮಾಹಿತಿಯನ್ನು ಇಲಾಖೆ ಸುರಕ್ಷಿತವಾಗಿರಿಸುತ್ತದೆ.

7. ಹಣಕಾಸು ಇಲಾಖೆಯ ID ಯಲ್ಲಿ ಸಮೀಕ್ಷೆ ವೆಚ್ಚದ ನಿಬಂಧನೆಯನ್ನು ಮಾಡಲಾಗುವುದು.

ಈ ಆದೇಶ ಹೊರಡಿಸುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, "ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರವು ತನ್ನ ಬಹುನಿರೀಕ್ಷಿತ ಜಾತಿ ಸಮೀಕ್ಷೆಯ ಸಂಶೋಧನೆಗಳನ್ನು ಬಿಡುಗಡೆ ಮಾಡಿತು. ಇದರಿಂದ ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಇತರೆ ಹಿಂದುಳಿದ ವರ್ಗಗಳು (OBCs) ಮತ್ತು ಅತ್ಯಂತ ಹಿಂದುಳಿದ ವರ್ಗಗಳು (EBCs) ಶೇ.63 ರಷ್ಟಿದೆ ಎಂದು ಬಹಿರಂಗಪಡಿಸಿತು. ಇದು ಮುಂಬರುವ ಚುನಾವಣೆಗಳಲ್ಲಿ ಮೈತ್ರಿಗೆ ಸಹಾಯ ಮಾಡುತ್ತದೆ" ಎಂದು ಹೇಳಿದ್ದರು.

ಇದನ್ನೂ ಓದಿ: ಬಿಹಾರ ಜಾತಿ ಗಣತಿಯ ಹೆಚ್ಚುವರಿ ಮಾಹಿತಿ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.