ಜೈಪುರ (ರಾಜಸ್ಥಾನ ) : ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್ಟೇಬಲ್ವೊಬ್ಬರನ್ನು ಸ್ಥಳೀಯರು ಮಂಚಕ್ಕೆ ಕಟ್ಟಿ ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಕಾನ್ಸ್‌ಟೇಬಲ್ ಮಹೇಶ್ ಕುಮಾರ್ ಗುರ್ಜರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ವಿವಾಹಿತ ಮಹಿಳೆ ದೂರು ದಾಖಲಿಸಿದ ಬಳಿಕ ಪರಾರಿಯಾಗಿರುವ ಆರೋಪಿ ಗುರ್ಜರ್ ಮತ್ತು ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಎಚ್‌ಒ) ಅವರನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಮಂಗಳವಾರ ರಾತ್ರಿ ಕಾನ್ಸ್‌ಟೇಬಲ್ ಮಹೇಶ್ ಕುಮಾರ್ ಅವರು 30 ವರ್ಷದ ಮಹಿಳೆಯೊಬ್ಬರು ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ, ಮಹಿಳೆ ಕಿರುಚಾಡಿದ್ದು, ಬಳಿಕ ನೆರೆಹೊರೆಯವರು ಅತನನ್ನು ಹಿಡಿದಿದ್ದಾರೆ. ಅಷ್ಟರಲ್ಲಿ, ಸಂತ್ರಸ್ತೆಯ ಕುಟುಂಬಸ್ಥರು ಸಹ ಹಿಂತಿರುಗಿದ್ದು, ಆರೋಪಿಯನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಬಂಡಿಕುಯಿ ಈಶ್ವರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್ವುಡ್ ನಿರ್ಮಾಪಕನ ಬಂಧನ
ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಆರೋಪಿ ತಪ್ಪಿಸಿಕೊಂಡು ಹೋಗಲು ಪೊಲೀಸರು ಬಿಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಬಳಿಕ ಗುರ್ಜರ್ ಮತ್ತು ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಕಾನ್ಸ್‌ಟೇಬಲ್ ಪರಾರಿಯಾಗಿದ್ದು, ಆತನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಗುರುವಾರ ಸಂತ್ರಸ್ತ ಮಹಿಳೆಯು ಪೊಲೀಸರಿಗೆ ದೂರು ನೀಡಿದ ಬಳಿಕ ವಿಷಯ ಬೆಳಕಿಗೆ ಬಂದಿದೆ ಎಂದು ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ : 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 30 ವರ್ಷದ ವ್ಯಕ್ತಿ
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಇನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸಿಟಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗತ್‌ದೇವ್ ತಲಾಬ್ ಬಳಿ 30 ವರ್ಷದ ವ್ಯಕ್ತಿಯೊಬ್ಬ ನಿನ್ನೆ ಸಂಜೆ ವೇಳೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. ಜೀವನ್ ಜ್ಯೋತಿ ಕಾಲೋನಿ ನಿವಾಸಿ ರಾಕೇಶ್ ವರ್ಮಾ (30) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಬಾಲಕಿಗೆ ರೇವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿ ಕಾಲಿಗೆ ಗುಂಡೇಟು
ಇದನ್ನೂ ಓದಿ : ಬೆಂಗಳೂರು: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಖಾಸಗಿ ಶಾಲಾ ಪ್ರಾಂಶುಪಾಲರ ಬಂಧನ