ETV Bharat / bharat

ಹೆಚ್ಚು ಅಂಕದ ಆಮಿಷವೊಡ್ಡಿ ವಿದ್ಯಾರ್ಥಿನಿಯರ ಮೇಲೆ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ - ವಿದ್ಯಾರ್ಥಿನಿಗೆ ಹೆಚ್ಚು ಅಂಕ ಆಸೆ ತೋರಿಸಿ ಲೈಂಗಿಕ ಬೇಡಿಕೆ

ರಾಜಸ್ಥಾನದ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಹೆಚ್ಚು ಅಂಕಗಳನ್ನು ನೀಡುವ ಆಮಿಷವೊಡ್ಡಿ, ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ.

Rajasthan Technical University, Kota
ಕೋಟಾದ ರಾಜಸ್ಥಾನದ ತಾಂತ್ರಿಕ ವಿಶ್ವವಿದ್ಯಾಲಯ
author img

By

Published : Dec 23, 2022, 7:21 PM IST

ಕೋಟಾ (ರಾಜಸ್ಥಾನ): ಕೋಟಾದ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ವೊಬ್ಬರ ಲೈಂಗಿಕ ಬೇಡಿಕೆ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಪ್ರೊ.ಗಿರೀಶ್ ಪರ್ಮಾರ್ ಎಂಬವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ನೀಡುವುದಕ್ಕಾಗಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಆ ನಂತರ ಡಿ. 21 ರ ರಾತ್ರಿ ಆರೋಪಿ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯ ಡಿಸೆಂಬರ್ 22 ರಂದು ಅವರನ್ನು ಸೇವೆಯಿಂದಲೂ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಿಡಿಯೋಗಳಿವೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿರುವ ಅರ್ಪಿತ್ ಅಗರ್ವಾಲ್ ಎಂಬಾತನನ್ನು ಡಿ. 25ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಶ್ಲೀಲ ವಿಡಿಯೋವನ್ನು ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ ಎಂದು ನಗರ ಎಸ್‌ಪಿ ಕೇಸರ್ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಆ ವಿಡಿಯೋಗಳನ್ನು ಸಂಪೂರ್ಣ ತನಿಖೆ ಮಾಡಲಾಗುತ್ತಿದೆ. ಆರೋಪಿಗಳು ಕೆಲವು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಮಾಡಿರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮತ್ತೊಬ್ಬ ವಿದ್ಯಾರ್ಥಿನಿಯಿಂದ ದೂರು: ಆರ್‌ಟಿಯು ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬರು ಪ್ರಕರಣ ದಾಖಲಿಸಿದ್ದು, ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇತರ ಇಬ್ಬರು ವಿದ್ಯಾರ್ಥಿನಿಯರು ಸಹ ಪೊಲೀಸರಿಗೆ ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ. ಅವರ ಹೇಳಿಕೆಗಳನ್ನು ಸಹ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಗುರುವಾರ ಮತ್ತೊಬ್ಬ ವಿದ್ಯಾರ್ಥಿನಿ ಕೂಡ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇಬ್ಬರೂ ಆರೋಪಿಗಳನ್ನು ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಾಗುವುದು ಎಂದು ನಗರ ಎಸ್ಪಿ ಶೇಖಾವತ್ ಮಾಹಿತಿ ನೀಡಿದರು.

ಇದನ್ನೂಓದಿ:ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್​​ ಪ್ರಾರಂಭಿಸಲು ಚಿಂತನೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.