ಜೈತರಣ್ (ರಾಜಸ್ಥಾನ): ಪ್ರವಾದಿ ಮುಅಹ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಡಿಪಿಯಾಗಿ ಬಳಸಿದ್ದಕ್ಕೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಯುವಕನಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಜೈತರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜುಲೈ 7 ರಂದು ಸಂಜೆ ತನ್ನ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್ ವಿಡಿಯೋ ಕರೆ ಬಂದಿದ್ದು, ಅಲ್ಲಿ ದುಷ್ಕರ್ಮಿಗಳು ನೂಪುರ್ ಶರ್ಮಾ ಅವರ ಚಿತ್ರವನ್ನು ತೆಗೆಯುವಂತೆ ಹೇಳಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಯುವಕ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾನೆ ಎಂದು ಜೈತರಣ್ ಡಿಎಸ್ಪಿ ಸುಖರಾಮ್ ವಿಷ್ಣೋಯ್ ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯುವಕನ ಭದ್ರತೆಗೆ ಶಸ್ತ್ರಸಜ್ಜಿತ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮನೆಗೆಲಸ ಮಾಡುವ ಸೋಗಿನಲ್ಲಿ ಮನೆಗಳ್ಳತನ: ಲೇಡಿ ಬಾಂಬೆ ಗ್ಯಾಂಗ್ ಅರೆಸ್ಟ್