ETV Bharat / bharat

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್​ - ರಾಜೀವ್ ಹತ್ಯೆ ಅಪರಾಧಿ ಎಜಿ ಪೆರಾರಿವಾಳನ್

ಕೇಂದ್ರ ಸರ್ಕಾರದ ವಿರೋಧವಿದ್ದರೂ, ಸುಪ್ರೀಂಕೋರ್ಟ್ ರಾಜೀವ್ ಗಾಂಧಿ ಹತ್ಯೆಯ ಅಪರಾಧಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪೆರಾರಿವಾಳನ್​ಗೆ ಜಾಮೀನು ನೀಡಿದೆ.

Rajiv Gandhi assassination: SC grants bail to convict AG Perarivalan
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್​
author img

By

Published : Mar 9, 2022, 5:23 PM IST

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ.ಪೆರಾರಿವಾಳನ್‌ಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಪೆರಾರಿವಾಳನ್ ಅವರ ನಡವಳಿಕೆ, ಅನಾರೋಗ್ಯ ಮಾತ್ರವಲ್ಲದೇ ಅವರು 30 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಯೇ ಕಳೆದಿದ್ದಾರೆ ಎಂಬ ಅಂಶಗಳನ್ನು ಆಧಾರವಾಗಿರಿಸಿಕೊಂಡು ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಅವರು ಈ ಮೊದಲು ಪೆರೋಲ್ ಮೇಲೆ ಬಿಡುಗಡೆಯಾಗಿದ್ದಾಗಲೂ ಅವರ ನಡವಳಿಕೆ ಮೇಲೆ ಯಾವುದೇ ಆರೋಪಗಳಿರಲಿಲ್ಲ ಎಂಬುದನ್ನೂ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು ಗಣನೆಗೆ ತೆಗೆದುಕೊಂಡಿದೆ.

ಅರ್ಜಿದಾರರ ನಡವಳಿಕೆ, ಅನಾರೋಗ್ಯ, ಶೈಕ್ಷಣಿಕ ಅರ್ಹತೆ ಮತ್ತು ಅವರು 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ವಾರಣಾಸಿಯಲ್ಲಿ ವೋಟಿಂಗ್‌ ಮಷಿನ್‌ ಸ್ಥಳಾಂತರ ಪ್ರಕರಣ: ಜಿಲ್ಲಾಧಿಕಾರಿ ಅಮಾನತು?

ಇದರ ಜೊತೆಗೆ, ಈಗ ನೀಡಿರುವ ಜಾಮೀನು ವಿಚಾರಣಾ ನ್ಯಾಯಾಲಯದ ಷರತ್ತುಗಳನ್ನೂ ಒಳಪಟ್ಟಿರುತ್ತದೆ. ಜಾಮೀನು ಪಡೆದವರು ಪ್ರತಿ ತಿಂಗಳ ಮೊದಲ ವಾರದಲ್ಲಿ ತಮ್ಮ ಸಮೀಪದಲ್ಲಿರುವ ಪೊಲೀಸ್​ ಠಾಣೆಯಲ್ಲಿ ವರದಿ ಮಾಡಬೇಕು ಎಂದು ಪೀಠ ಸೂಚನೆ ನೀಡಿದೆ.

ಪೆರಾರಿವಾಳನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರ ಸರ್ಕಾರವು ಕಟುವಾಗಿ ವಿರೋಧಿಸಿದ್ದು, ಅದರ ಹೊರತಾಗಿಯೂ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡಿದೆ. ಈಗಾಗಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೆರಾರಿವಾಳನ್ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದ್ದು, ಈ ಬಗ್ಗೆ ರಾಜ್ಯಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುದು ಗಮನಿಸಬೇಕಾದ ವಿಚಾರ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.