ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ.
-
Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.
— Rajnath Singh (@rajnathsingh) May 2, 2021 " class="align-text-top noRightClick twitterSection" data="
">Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.
— Rajnath Singh (@rajnathsingh) May 2, 2021Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.
— Rajnath Singh (@rajnathsingh) May 2, 2021
215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವುದಕ್ಕೆ ಅಭಿನಂದನೆಗಳು. ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ತಮಿಳುನಾಡಿನಲ್ಲಿ ಗೆಲುವು ಸಾಧಿಸುತ್ತಿರುವ ಡಿಎಂಕೆ ಹಾಗೂ ಕೇರಳದ ಪಿಣರಾಯಿ ವಿಜಯನ್ಗೂ ರಾಜನಾಥ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ.
ಈಗಾಗಲೇ ಮಮತಾ ಬ್ಯಾನರ್ಜಿಗೆ ಅಖಿಲೇಶ್ ಯಾದವ್, ಶಿವಸೇನೆ ಹಾಗೂ ಎನ್ಸಿಪಿ ಮುಖಂಡ ಶರದ್ ಪವಾರ್ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. 294 ಕ್ಷೇತ್ರಗಳ ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆದಿತ್ತು. ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದರಿಂದ ಚುನಾವಣೆ ಹಾಗೂ ಪ್ರಚಾರದ ವೇಳೆ ಕೆಲವೊಂದು ಅಹಿತಕರ ಘಟನೆ ಸಹ ನಡೆದಿದ್ದವು. ಇದೆಲ್ಲ ಮುಗಿದು ಇಂದು ಮತ ಎಣಿಕೆ ನಡೆಯುತ್ತಿದ್ದು, ಟಿಎಂಸಿ 215ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: Watch: ಊಟಕ್ಕೂ ಮೊದಲು ಪ್ರಾರ್ಥನೆ.. ನಾಯಿ ಮರಿಗಳಿಗೆ ಪಾಠ ಹೇಳುವ ಮಹಿಳೆ