ETV Bharat / bharat

ನಿವೃತ್ತ ನ್ಯಾಯಾಧೀಶರ ಪಿಂಚಣಿ ಏರಿಕೆಗೆ ಮಸೂದೆ: ರಾಜ್ಯಸಭೆಯಲ್ಲಿ ಮಂಡನೆ

ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರ (ವೇತನಗಳು ಮತ್ತು ಸೇವಾ ಷರತ್ತುಗಳು) ಕಾಯ್ದೆ-1954 ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ (ಸೇವೆಯ ವೇತನಗಳು ಮತ್ತು ಷರತ್ತುಗಳು) ಕಾಯ್ದೆ- 1958 ಗೆ ತಿದ್ದುಪಡಿ ತರಲು ಮಸೂದೆ ಮಂಡಿಸಿದೆ.

Law and Justice Minister Kiran Rijiju
ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು
author img

By

Published : Dec 13, 2021, 10:45 PM IST

ನವದೆಹಲಿ: ಹೈಕೋರ್ಟ್​​ ಮತ್ತು ಸುಪ್ರೀಂಕೋರ್ಟ್​​​ನ ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಏರಿಕೆಗೆ ಸಂಬಂಧಿಸಿದಂತೆ ಮಸೂದೆಯನ್ನು ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಿತು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ (ವೇತನಗಳು ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ 2021 ಅನ್ನು ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ರಾಜ್ಯಸಭೆಯಲ್ಲಿ ಮಂಡಿಸಿದರು. ಡಿಸೆಂಬರ್ 8 ರಂದು ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆತಿದೆ.

ಇದು ಸಣ್ಣ ತಿದ್ದುಪಡಿಯಾಗಿದೆ. ಸೀಮಿತ ಉದ್ದೇಶಕ್ಕಾಗಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿಯಲ್ಲಿ ಭಾಗಶಃ ಏರಿಕೆ ಮಾಡುವುದು ಇದರ ಉದ್ದೇಶವಾಗಿದೆ. ಇದು ಹೈ ಕೋರ್ಟ್​ ಮತ್ತು ಸುಪ್ರೀಂಕೋರ್ಟ್​​​​ನ ನ್ಯಾಯಾಧೀಶರ ಪಿಂಚಣಿಯಲ್ಲಿನ ಕ್ವಾಂಟಮ್ ಜಂಪ್​ಗೆ ಸಂಬಂಧಿಸಿದೆ ಎಂದು ರಿಜಿಜು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಂಗಾನದಿ ತಟದಲ್ಲಿ ನಡೆದ 'ಗಂಗಾ ಆರತಿ' ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.