ಅಲ್ವಾರ್(ರಾಜಸ್ಥಾನ): ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದೆ.
ಟಿಕಾಯತ್ ಅವರು ಅಲ್ವಾರ್ನ ಹರ್ಸೋರಾ ಗ್ರಾಮದಲ್ಲಿ ಸಭೆ ನಡೆಸಿ ಬನ್ಸೂರ್ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ತಮ್ಮ ಕಾರಿನ ಮೇಲೆ ಹಲ್ಲೆಯಾಗಿರುವ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು, ಈ ದಾಳಿಯ ಹಿಂದೆ ಬಿಜೆಪಿ ಗೂಂಡಾಗಳಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಇದು ಪ್ರಜಾಪ್ರಭುತ್ವದ ಸಾವು ಎಂದಿದ್ದಾರೆ.
-
राजस्थान के अलवर जिले के ततारपुर चौराहा, बानसूर रोड़ पर भाजपा के गुंडों द्वारा जानलेवा पर हमला किए गए, लोकतंत्र के हत्या की तस्वीरें pic.twitter.com/aBN9ej7AXS
— Rakesh Tikait (@RakeshTikaitBKU) April 2, 2021 " class="align-text-top noRightClick twitterSection" data="
">राजस्थान के अलवर जिले के ततारपुर चौराहा, बानसूर रोड़ पर भाजपा के गुंडों द्वारा जानलेवा पर हमला किए गए, लोकतंत्र के हत्या की तस्वीरें pic.twitter.com/aBN9ej7AXS
— Rakesh Tikait (@RakeshTikaitBKU) April 2, 2021राजस्थान के अलवर जिले के ततारपुर चौराहा, बानसूर रोड़ पर भाजपा के गुंडों द्वारा जानलेवा पर हमला किए गए, लोकतंत्र के हत्या की तस्वीरें pic.twitter.com/aBN9ej7AXS
— Rakesh Tikait (@RakeshTikaitBKU) April 2, 2021
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ-ಉತ್ತರ ಪ್ರದೇಶ ಗಾಜಿಪುರ ಗಡಿಯಲ್ಲಿ ಕಳೆದ ನಾಲ್ಕು ತಿಂಗಳಿಂದ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ ಹಾಗೂ ಬೆಳಗಾವಿಯಲ್ಲೂ ಟಿಕಾಯತ್ ರೈತ ಮಹಾಪಂಚಾಯತ್ನಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.