ETV Bharat / bharat

ಅತ್ಯಾಚಾರ ಪ್ರಕರಣ: ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ - ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ

ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಕಾರಿನಿಂದ ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಜರುಗಿದೆ.

rape-accused-evades-police-in-noida
ಅತ್ಯಾಚಾರ ಪ್ರಕರಣ: ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ
author img

By

Published : Nov 10, 2022, 6:21 PM IST

ನೋಯ್ಡಾ (ಉತ್ತರ ಪ್ರದೇಶ): ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ತನ್ನ ಕಾರಿನಿಂದ ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದಿದ್ದಾನೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಇಲ್ಲಿನ ಅಮ್ರಪಾಲಿ ಜೋಡಿಯಾಕ್ ಸೊಸೈಟಿ ನಿವಾಸಿ ನೀರಜ್ ಸಿಂಗ್​ ಎಂಬಾತ ಕಂಪನಿಯೊಂದರಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆತನೊಂದಿಗೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ತನಿಖೆಗಾಗಿ ಪೊಲೀಸರು ಆರೋಪಿ ನೀರಜ್​ನನ್ನು ವಶಕ್ಕೆ ಪಡೆಯಲು ಸೊಸೈಟಿಗೆ ಬಂದಿದ್ದರು. ಆದರೆ, ಈ ವೇಳೆ ತಪ್ಪಿಸಲು ಯತ್ನಿಸಿದ್ದಾರೆ. ಆಗ ಸೆಕ್ಯೂರಿಟಿ ಗಾರ್ಡ್‌ ಆರೋಪಿಯನ್ನು ತಡೆಯಲು ಪ್ರಯತ್ನಿಸಿದ್ದು, ಕಾರಿನಿಂದ ಗುದ್ದಿ ಆರೋಪಿ ಪರಾರಿಯಾಗಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ವೈರಲ್​ ಆಗಿದೆ.

  • #WATCH | UP: A wanted rape accused runs over security personnel at Amrapali Zodiac Society in Noida Sec 120 while fleeing from there after Police were tipped off about his presence. The security personnel was injured, FIR registered. Teams formed to nabe him.

    (Video: CCTV) pic.twitter.com/YVLn1xiHwZ

    — ANI UP/Uttarakhand (@ANINewsUP) November 10, 2022 " class="align-text-top noRightClick twitterSection" data=" ">

ಈ ಬಗ್ಗೆ ಪ್ರತಿಕ್ರಿಯಿಸಿರುವ ನೋಯ್ಡಾ ಡಿಸಿಪಿ ಹರೀಶ್​ ಚಂದ್ರ, ಅತ್ಯಾಚಾರ ಆರೋಪದ ದೂರು ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಆಗ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಕಾರನ್ನು ವೇಗವಾಗಿ ಚಲಾಯಿಸಿ ಸೆಕ್ಯೂರಿಟಿ ಗಾರ್ಡ್‌ಗೆ ಗುದ್ದಿದ್ದಾರೆ. ಈ ಘಟನೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಗಾಯಗೊಂಡಿದ್ದಾರೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.