ನೆಲ್ಲೂರು(ಆಂಧ್ರಪ್ರದೇಶ): ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ. ಮಹಿಳಾ ಶಕ್ತಿಯನ್ನು ಗೌರವಿಸುವ ದಿನ. ಇಂತಹ ವಿಶೇಷ ದಿನದಂದೇ ವಿದೇಶಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ಬ್ರಿಟನ್ ದೇಶದ ಯುವತಿಯೊಬ್ಬಳು ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಕ್ಯಾಬ್ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಆಕೆ ತೀವ್ರ ಪ್ರತಿರೋಧ ಒಡ್ಡಿದಾಗ ಹಲ್ಲೆ ನಡೆಸಿದ್ದಾರೆ. ಯುವತಿಯು ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಕಿರುಚಿದ್ದಾಳೆ.
ಇದನ್ನು ಕೇಳಿಸಿಕೊಂಡ ಅಲ್ಲಿದ್ದವರು ಸ್ಥಳಕ್ಕೆ ಧಾವಿಸುವ ವೇಳೆಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಯಾಬ್ ಚಾಲಕ ಮತ್ತು ಆತನ ಸಂಗಡಿಗನ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೇ ವಿದೇಶಿ ಯುವತಿಯನ್ನು ರಕ್ಷಿಸಿ ಕರೆದೊಯ್ಯಲಾಗಿದೆ.
ಇದನ್ನೂ ಓದಿ: ಎಷ್ಟು ತಿಂದರೂ ಕಡಿಮೆಯಾಗದ ಹಸಿವು! 10 ವರ್ಷದ ಬಾಲಕನಿಗೆ ಅಪರೂಪದ ಕಾಯಿಲೆ