ETV Bharat / bharat

ಜೆಎನ್‌ಯುನ ಪಿಎಚ್‌ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ! - ಪಿಎಚ್‌ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ

ನಿನ್ನೆ (ಸೋಮವಾರ) ರಾತ್ರಿ 12 ಗಂಟೆ ವೇಳೆಗೆ ಜೆಎನ್‌ಯು ಪಿಎಚ್‌ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿದೆ ಎನ್ನಲಾಗ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Jan 18, 2022, 10:07 AM IST

ನಹದೆಹಲಿ: ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ನಿನ್ನೆ (ಸೋಮವಾರ) ರಾತ್ರಿ 12 ಗಂಟೆ ವೇಳೆಗೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬೈಕ್​​ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾಡಿ ಸಂತ್ರಸ್ತೆಯ ಫೋನ್ ದೋಚಿ ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ.

ಸೋಮವಾರ ತಡರಾತ್ರಿ ನಡೆದ ಈ ಘಟನೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚಲನ ಮೂಡಿಸಿದೆ. ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಕ್ಯಾಂಪಸ್‌ನಿಂದ ಬಂದಿದ್ದಾನೋ ಅಥವಾ ಹೊರಗಿನವನೋ ಎಂಬುದು ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ: ವರ್ಷಗಳ ಕಾಲ ಮಗಳ ಮೇಲೆ ಅತ್ಯಾಚಾರ: ಕಾಮುಕ ತಂದೆಯ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.