ETV Bharat / bharat

8ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ: ಸಹಪಾಠಿಗಳಿಂದಲೇ ಕೃತ್ಯ! - ಇಬ್ಬರು ಸಹಪಾಠಿಗಳು ಲೈಂಗಿಕ ದೌರ್ಜನ್ಯ

ಬಾಲಕಿಯ ಮೇಲೆ ಆಕೆಯ ಇಬ್ಬರು ಸಹಪಾಠಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇತರ ಎಲ್ಲ ಸಹಪಾಠಿಗಳು ನೃತ್ಯ ಅಭ್ಯಾಸಕ್ಕಾಗಿ ತರಗತಿಯಿಂದ ಹೊರಬಂದಾಗ ಇಬ್ಬರು ಆರೋಪಿಗಳು ಪರಿಸ್ಥಿತಿಯ ಲಾಭ ಪಡೆದು ಅಪರಾಧ ಕೃತ್ಯ ಎಸಗಿದ್ದಾರೆ ಎಂದು ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

8ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ: ಸಹಪಾಠಿಗಳಿಂದಲೇ ಕೃತ್ಯ!
Rape of 8th class girl: Committed by classmates
author img

By

Published : Dec 2, 2022, 2:18 PM IST

ಮುಂಬೈ: ಮುಂಬೈನ ಮಾಟುಂಗಾ ಪ್ರದೇಶದಲ್ಲಿರುವ ನಗರ ಪಾಲಿಕೆಯ ಶಾಲೆಯೊಂದರ ತರಗತಿಯೊಳಗೆ ಇಬ್ಬರು ಬಾಲಕರು ತಮ್ಮ 13 ವರ್ಷದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬಾಲಕಿಯ ಮೇಲೆ ಆಕೆಯ ಇಬ್ಬರು ಸಹಪಾಠಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇತರ ಎಲ್ಲ ಸಹಪಾಠಿಗಳು ನೃತ್ಯ ಅಭ್ಯಾಸಕ್ಕಾಗಿ ತರಗತಿಯಿಂದ ಹೊರಬಂದಾಗ ಇಬ್ಬರು ಆರೋಪಿಗಳು ಪರಿಸ್ಥಿತಿಯ ಲಾಭ ಪಡೆದು ಅಪರಾಧ ಕೃತ್ಯ ಎಸಗಿದ್ದಾರೆ ಎಂದು ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು 8 ನೇ ತರಗತಿಯ ವಿದ್ಯಾರ್ಥಿಗಳು ಎಂದು ಅವರು ಹೇಳಿದರು.

ಘಟನೆಯ ನಂತರ ಬಾಲಕಿಯು ಆಘಾತಕ್ಕೀಡಾಗಿದ್ದು, ಮನೆಗೆ ಹೋಗಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಅವರು ತಕ್ಷಣ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ದೂರಿನ ಆಧಾರದ ಮೇಲೆ ಪೊಲೀಸರು ಬಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 DA (ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಆರೋಪಿಗಳನ್ನು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ದಕ್ಷಿಣ ಮುಂಬೈನ ಡೋಂಗ್ರಿಯಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ರಾಂಚಿ ಎಂಜಿನಿಯರಿಂಗ್​​ ವಿದ್ಯಾರ್ಥಿನಿ ಅತ್ಯಾಚಾರ​​ & ಕೊಲೆ ಪ್ರಕರಣ​: ಆರೋಪಿಗೆ ಗಲ್ಲು ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.