ETV Bharat / bharat

ಕೃಷಿ ಕಾನೂನು ವಿರುದ್ಧ ಪ್ರತಿಭಟನೆ: ಪ್ರತಿಪಕ್ಷಗಳ ಇಬ್ಬಗೆ ನೀತಿಗೆ ರವಿಶಂಕರ್ ಪ್ರಸಾದ್ ಕಿಡಿ - ಪ್ರತಿಪಕ್ಷಗಳ ಇಬ್ಬಗೆ ನೀತಿ ವಿರುದ್ಧ ರವಿಶಂಕರ್ ಪ್ರಸಾದ್ ಕಿಡಿ

ಕೃಷಿ ಕಾನೂನುಗಳ ಬಗ್ಗೆ ರೈತರ ಅನುಮಾನಗಳನ್ನು ನಿವಾರಿಸಲು ಸರ್ಕಾರ ಪ್ರಯತ್ನಿಸುತ್ತಿದ್ದರೆ, ಪ್ರತಿಪಕ್ಷಗಳು 'ವಿವಿಧ ಹೇಳಿಕೆಗಳನ್ನು ನೀಡಿ' ಪ್ರತಿಭಟನಾಕಾರರನ್ನು ಕೆರಳಿಸಲು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

Ravi Shankar Prasad hits out at opposition over farm laws
ರವಿಶಂಕರ್ ಪ್ರಸಾದ್
author img

By

Published : Dec 7, 2020, 8:03 PM IST

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಪ್ರತಿಪಕ್ಷಗಳನ್ನು ದೂಷಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಬಗ್ಗೆ ಪ್ರತಿಪಕ್ಷಗಳು ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಯುಪಿಎ ಸರ್ಕಾರದ ಮೊದಲ ಅವಧಿಯಲ್ಲಿ ಪ್ರತಿಪಕ್ಷಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದವು. ಈಗ ಅವರು ರೈತರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಕೃಷಿ ಕಾನೂನುಗಳ ಬಗ್ಗೆ ರೈತರ ಅನುಮಾನಗಳನ್ನು ನಿವಾರಿಸಲು ಸರ್ಕಾರ ಪ್ರಯತ್ನಿಸುತ್ತಿದ್ದರೆ, ಪ್ರತಿಪಕ್ಷಗಳು ವಿವಿಧ ಹೇಳಿಕೆಗಳನ್ನು ನೀಡಿ ಪ್ರತಿಭಟನಾಕಾರರನ್ನು ಕೆರಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರವಿಶಂಕರ್ ಪ್ರಸಾದ್, ಚುನಾವಣಾ ಸೋಲಿನ ನಂತರ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಆಂದೋಲನ ನಡೆಸುತ್ತಿದೆ. ಇದಲ್ಲದೆ 2019ರಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ) (ಎಪಿಎಂಆರ್) ಕಾಯ್ದೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರ ಕೃಷಿ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಡಿ ಕಾಯ್ದೆಯಲ್ಲಿ ಸುಧಾರಣೆಗಳನ್ನು ತರುವ ಮಹತ್ವವನ್ನು ತಿಳಿಸುವ ಮೂಲಕ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದಿದ್ದರು. ಪ್ರತಿಪಕ್ಷದ ದ್ವಿಮುಖ ನೀತಿಯನ್ನು ಪ್ರಶ್ನಿಸಿದ ಅವರು, 2005ರಲ್ಲಿ ಪವಾರ್ ಅವರ ಪ್ರಸ್ತಾಪವನ್ನು ರಾಷ್ಟ್ರೀಯ ಜನತಾದಳ, ಸಿಪಿಐ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಎಲ್ಲಾ ಪ್ರತಿಪಕ್ಷಗಳು ಬೆಂಬಲಿಸಿವೆ ಎಂದು ಹೇಳಿದ್ದಾರೆ.

ಸೆಲೆಬ್ರಿಟಿಗಳು ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂದಿರುಗಿಸುವ ಬಗ್ಗೆ ಮಾತನಾಡಿದ ಅವರು, ಗೌರವ ಸ್ವೀಕರಿಸುವುದು ಅಥವಾ ಹಿಂದಿರುಗಿಸುವುದು ಅವರ ಹಕ್ಕು. 'ಕೆಲವರು ಅದನ್ನು ಖ್ಯಾತಿಗಾಗಿ ಮಾಡುತ್ತಿದ್ದರೆ ಏನೂ ಮಾಡಲಾಗುವುದಿಲ್ಲ' ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.