ಜಾಮ್‌ನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬಗ್ಗೆ ರವೀಂದ್ರ ಜಡೇಜಾ ಗುಜರಾತಿ ಭಾಷೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ತಮ್ಮ ಪತ್ನಿಗೆ ಮತ ಹಾಕುವಂತೆ ರವೀಂದ್ರ ಜಡೇಜಾ ಜಾಮ್‌ನಗರ ನಿವಾಸಿಗಳಿಗೆ ಮನವಿ ಮಾಡಿದ್ದಾರೆ.
ಇಂದು ರಿವಾಬಾ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ರವೀಂದ್ರ ಜಡೇಜಾ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದರು. ಇದರಲ್ಲಿ ರಿವಾಬಾಗೆ ಮತ ಹಾಕುವ ಮೂಲಕ ಜಾಮ್‌ನಗರದ ಜನರು ಯಶಸ್ವಿಯಾಗಬೇಕೆಂದು ಅವರು ಮನವಿ ಮಾಡುತ್ತಿದ್ದಾರೆ. ತಮ್ಮ ಪತ್ನಿಗೆ ಮತ ನೀಡುವಂತೆ ಅವರು ಜಾಮ್‌ನಗರದ ಜನತೆಗೆ ಮಾತ್ರವಲ್ಲದೆ ಕ್ರಿಕೆಟ್ ಪ್ರೇಮಿಗಳನ್ನೂ ಸಹ ಕೋರಿದ್ದಾರೆ.
-
જામનગર ના મારા તમામ મિત્રો ને મારુ દીલ થી આમંત્રણ છે. જય માતાજી🙏🏻 pic.twitter.com/olZxvYVr3t
— Ravindrasinh jadeja (@imjadeja) November 13, 2022 " class="align-text-top noRightClick twitterSection" data="
">જામનગર ના મારા તમામ મિત્રો ને મારુ દીલ થી આમંત્રણ છે. જય માતાજી🙏🏻 pic.twitter.com/olZxvYVr3t
— Ravindrasinh jadeja (@imjadeja) November 13, 2022જામનગર ના મારા તમામ મિત્રો ને મારુ દીલ થી આમંત્રણ છે. જય માતાજી🙏🏻 pic.twitter.com/olZxvYVr3t
— Ravindrasinh jadeja (@imjadeja) November 13, 2022
'ಗುಜರಾತ್ ವಿಧಾನಸಭಾ ಚುನಾವಣೆಯು ಟಿ20 ಕ್ರಿಕೆಟ್‌ನಂತೆ ಮುನ್ನಡೆಯುತ್ತಿದೆ. ನನ್ನ ಪ್ರೀತಿಯ ಜಾಮ್‌ನಗರ ನಿವಾಸಿಗಳು ಮತ್ತು ಎಲ್ಲಾ ಕ್ರಿಕೆಟ್ ಪ್ರೇಮಿಗಳು ವಿಧಾನಸಭಾ ಚುನಾವಣೆ ಬಂದಿರುವುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ಪತ್ನಿ ರಿವಾಬಾ ಜಡೇಜಾ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದು, ಅವರ ಗೆಲುವಿನ ವಾತಾವರಣ ನಿರ್ಮಿಸುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ' ಎಂದು ಹೇಳಿಕೊಂಡಿದ್ದಾರೆ.
ಮಾಜಿ ಶಾಸಕ ಧರ್ಮೇಂದ್ರ ಸಿಂಗ್ ಜಡೇಜಾ ಸ್ಥಾನಕ್ಕೆ ರಿವಾಬಾ ಜಡೇಜಾ ಆಯ್ಕೆಯಾಗಿದ್ದಾರೆ. ಅವರು ಜಾಮ್‌ನಗರ ಉತ್ತರ ವಿಧಾನಸಭೆಯಿಂದ ಗೆಲುವು ದಾಖಲಿಸಿದ್ದರು. ಬಿಜೆಪಿ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು ಆರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 14 ಮಹಿಳೆಯರಿಗೆ ಅವಕಾಶ ಸಿಕ್ಕಿದೆ.
ಓದಿ: ಗುಜರಾತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ವಡ್ಗಾಮ್ ಕ್ಷೇತ್ರದಿಂದ ಜಿಗ್ನೇಶ್ ಮೇವಾನಿ ಕಣಕ್ಕೆ