ETV Bharat / bharat

ಪಂಜಾಬ್‌ ಕಾಂಗ್ರೆಸ್‌ ಬಿಕ್ಕಟ್ಟು; ಉಸ್ತುವಾರಿ ರಾವತ್‌ ರಿಂದ ಇಂದು ಸೋನಿಯಾ ಗಾಂಧಿ ಭೇಟಿ

ಪಂಜಾಬ್‌ನಲ್ಲಿ ಮುಂದಿನ ವರ್ಷ ಎದುರಾಗುವ ವಿಧಾನಸಭೆ ಚುನಾವಣೆಯನ್ನು ಸಿಎಂ ಅಮರೀಂದರ್‌ ಸಿಂಗ್‌ ನಾಯಕತ್ವದಲ್ಲೇ ಕಾಂಗ್ರೆಸ್‌ ಎದುರಿಸಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೆ ಪಂಜಾಬ್‌ ಕೈ ಪಾಳೆಯದಲ್ಲಿ ಅಸಮಾಧಾನ ಎದ್ದಿದೆ. ರಾಜ್ಯ ಉಸ್ತುವಾರಿ ಹರೀಶ್‌ ರಾವತ್‌ ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದು, ಪಂಜಾಬ್‌ ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳ ಬಗ್ಗೆ ವಿವರಿಸುವ ಸಾಧ್ಯತೆ ಇದೆ.

Rawat to meet Sonia Gandhi to brief grievances of Sidhu camp
ಪಂಜಾಬ್‌ ಕಾಂಗ್ರೆಸ್‌ ಬಿಕ್ಕಟ್ಟು; ಉಸ್ತುವಾರಿ ರಾವತ್‌ ರಿಂದ ಇಂದು ಸೋನಿಯಾ ಗಾಂಧಿ ಭೇಟಿ
author img

By

Published : Aug 26, 2021, 11:37 AM IST

ನವದೆಹಲಿ: ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರ ನಾಯಕತ್ವದಲ್ಲೇ ಪಂಜಾಬ್‌ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್‌ನ ಹಿರಿಯ ನಾಯಕರು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್‌ ಕಾಂಗ್ರೆಸ್‌ ಉಸ್ತುವಾರಿ ಹರೀಶ್‌ ರಾವತ್‌ ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಪಿಪಿಸಿಸಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರ ಬಣದ ಕುಂದುಕೊರತೆಗಳ ಬಗ್ಗೆ ವಿವರಿಸಲಿದ್ದಾರೆ ಎನ್ನಲಾಗ್ತಿದೆ.

ಮುಂದಿನ ವರ್ಷ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ಬರುತ್ತಿದೆ. ಸಿಎಂ ಅಮರೀಂದರ್‌ ಸಿಂಗ್‌ ಅವರ ನೇತೃತ್ವದಲ್ಲೇ ಎಲೆಕ್ಷನ್‌ ಎದುರಿಸುತ್ತೇವೆ ಎಂದು ರಾವತ್‌ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಸಿಎಂ ಸಿಂಗ್‌ ಗಮನಹರಿಸಿ ಕೆಲಸ ಮಾಡಬೇಕು ಎಂದು ನಾಯಕಿ ಸೋನಿಯಾ ಗಾಂಧಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಪಂಜಾಬ್‌ ಕಾಂಗ್ರೆಸ್‌ನ ಎರಡೂ ಬಣಗಳ ನಡುವಿನ ಪರಿಸ್ಥಿತಿ ಮಾತ್ರ ಇನ್ನೂ ಸುಧಾರಿಸಿಲ್ಲ.

ಇದನ್ನೂ ಓದಿ: 'ಭಾರತಕ್ಕಾಗಿ ರಕ್ತ ಹರಿಸುವವರನ್ನು ಗೇಲಿ ಮಾಡಿದಂತೆ'.. ಸಿಧು ಸಲಹೆಗಾರರ ​​ಹೇಳಿಕೆಗೆ ತಿವಾರಿ ಆಕ್ರೋಶ

ನಿನ್ನೆಯಷ್ಟೇ ಸಿಧು ಬಣದ ನಾಲ್ವರು ಸಚಿವರು ಹಾಗೂ ಮೂವರು ಶಾಸಕರ ನಿಯೋಗ ಡೆಹ್ರಾಡೂನ್‌ನಲ್ಲಿ ಹರೀಶ್‌ ರಾವತ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರ್ಗತ್ ಸಿಂಗ್, ಮುಖ್ಯಮಂತ್ರಿ ಅಮರೀಂದರ್ ಸಿಂಗ್ ವಿರುದ್ಧ ಶಾಸಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಸಮಸ್ಯೆಗಳನ್ನು ಬಗೆಹರಿಸದ ಕಾರಣ, ಶಾಸಕರಲ್ಲಿ ಅಸಮಾಧಾನವಿದೆ. ಮುಖ್ಯಮಂತ್ರಿ ಎಲ್ಲಾ ಶಾಸಕರ ಸಭೆ ಕರೆದು ಚರ್ಚಿಸಿದ ನಂತರ ನಿರ್ಧರಿಸಬೇಕು ಎಂದು ಎಐಸಿಸಿ ವೀಕ್ಷಕರ ಮೇಲ್ವಿಚಾರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಲಹೆ ನೀಡುತ್ತೇನೆ ಎಂದು ಪರ್ಗತ್‌ ಹೇಳಿದ್ದಾರೆ.

ಈ ಎಲ್ಲಾ ಬೆಳವಣೆಗಳ ನಡುವೆ ಇಂದು ಉಸ್ತುವಾರಿ ಹರೀಶ್‌ ರಾವತ್‌ ಅವರು ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.