ETV Bharat / bharat

RBI Recruitment: 450 ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ​ - ದೇಶಾದ್ಯಂತ ಈ ನೇಮಕಾತಿ

ಆರ್​ಬಿಐನಿಂದ ದೇಶದ ವಿವಿಧ ರಾಜ್ಯಗಳಲ್ಲಿ ಅಸಿಸ್ಟೆಂಟ್​ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

RBI Invited application For 450 assistant post in various state

author img

By ETV Bharat Karnataka Team

Published : Sep 13, 2023, 12:41 PM IST

ಭಾರತೀಯ ರಿಸರ್ವ್​ ಬ್ಯಾಂಕ್​ನಿಂದ ಅಸಿಸ್ಟೆಂಟ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಒಟ್ಟು 450 ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಪ್ರತಿ ರಾಜ್ಯದಲ್ಲಿ ನಿರ್ದಿಷ್ಟ ಹುದ್ದೆಗಳನ್ನು ಮೀಸಲಿಡಲಾಗಿದೆ. ಕರ್ನಾಟಕ್ಕೆ 58 ಹುದ್ದೆಗಳನ್ನು ಮೀಸಲಿಡಲಾಗಿದೆ. ಪದವಿ ಹೊಂದಿರುವ ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಆರ್​ಬಿಐನಲ್ಲಿ ಖಾಲಿ ಇರುವ 450 ಅಸಿಸ್ಟೆಂಟ್​ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. ಬೆಂಗಳೂರಿನಲ್ಲಿ ಒಟ್ಟು 58 ಹುದ್ದೆಗಳ ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಶೇ 50ರಷ್ಟು ಅಂಕದೊಂದಿಗೆ ಪದವಿಯನ್ನು ಹೊಂದಿರಬೇಕು. ಯಾವ ರಾಜ್ಯಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆ ರಾಜ್ಯದ ಭಾಷೆ ಓದಲು, ಬರೆಯಲು ಮತ್ತು ಮಾತನಾಡುವಂತಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ ವಯೋಮಿತಿ 28 ವರ್ಷ ದಾಟಿರಬಾರದು. ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ. ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 450 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ವೇತನ: ಈ ಹುದ್ದೆಗಳಿಗೆ ಮಾಸಿಕ 47,849 ರೂ. ವೇತನ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ದೇಶಾದ್ಯಂತ ಏಕಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಪ್ರಿಲಿಮ್ಸ್​ ಪರೀಕ್ಷೆ, ಮೇನ್ಸ್​ ಪರೀಕ್ಷೆ, ಭಾಷಾ ಸಾಮರ್ಥ್ಯದ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಸೆಪ್ಟೆಂಬರ್​ 13ರಿಂದ ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 4 ಆಗಿದೆ. ಆನ್​ಲೈನ್​ ಮೂಲಕ ಪ್ರಿಲಿಮ್ಸ್​ ಮತ್ತು ಮೇನ್ಸ್​​ ಪರೀಕ್ಷೆ ನಡೆಸಲಾಗುವುದು. ಭಾಷಾ ಸಾಮರ್ಥ್ಯದ ಪರೀಕ್ಷೆ ಸ್ಥಳೀಯ ಭಾಷೆಗಳ ಅರ್ಥೈಸುವಿಕೆಗೆ ಸಂಬಂಧಿಸಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ ಅಭ್ಯರ್ಥಿಗಳು rbi.org.in ಇಲ್ಲಿಗೆ ಭೇಟಿ ನೀಡಬಹುದು.

ಇದನ್ನೂ ಓದಿ: UPSC Recruitment: ಇಂಜಿನಿಯರಿಂಗ್​ ಸೇವಾ ಪರೀಕ್ಷೆಗೆ ಅಧಿಸೂಚನೆ ಪ್ರಕಟ: 179 ಹುದ್ದೆಗಳಿಗೆ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.