ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದಂಡ ವಿಧಿಸಿದೆ. ರಿಸರ್ವ್ ಬ್ಯಾಂಕ್ನ ನಿಯಂತ್ರಣ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಲಾಗಿದೆ ಆರ್‌ಬಿಐ ಹೇಳಿದೆ.
RBI Penalty on Banks: 2019 ಮಾರ್ಚ್ 31ರಂದು, ನ್ಯಾಷನಲ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ಗಳ ಹಣಕಾಸಿನ ವಿಷಯಗಳ ಮೇಲೆ ಕಾನೂನು ಲೆಕ್ಕಪರಿಶೋಧನೆಗಳ ಮೇಲ್ವಿಚಾರಣಾ ಮೌಲ್ಯಮಾಪನ (ISE- Inspection for Supervisory Evaluation) ನಡೆಸಿತ್ತು. ಈ ವೇಳೆ ಬ್ಯಾಂಕ್ ದಾಖಲೆಗಳಲ್ಲಿ ಹಲವು ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಆರ್‌ಬಿಐ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (RBI penalty PNB) 80 ಲಕ್ಷ ರೂಪಾಯಿ ಹಾಗೂ ಐಸಿಐಸಿಐ ಬ್ಯಾಂಕ್‌ಗೆ (RBI penalty ICICI) 30 ಲಕ್ಷ ರೂಪಾಯಿ ದಂಡ ವಿಧಿಸಿ, ಆದೇಶ ಹೊರಡಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ-1949ರ ಸೆಕ್ಷನ್-19 ಅಡಿಯಲ್ಲಿ ದಂಡ ವಿಧಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ IMF ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್