ಮುಂಬೈ: ಆಡಳಿತಾತ್ಮಕವಾಗಿ ಹಾಗೂ ಸಾಲವನ್ನು ಮರುಪಾವತಿ ಮಾಡಲು ವಿಫಲವಾಗಿರುವ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ (RCL) ಕಂಪನಿಯ ಆಡಳಿತ ಮಂಡಳಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ರದ್ದುಗೊಳಿಸಿದೆ.
ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್ನ ಅಡಿ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ ಬರಲಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಈಗ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ, ಆಡಳಿತಾತ್ಮಕವಾಗಿಯೂ ವಿಫಲವಾಗಿರುವ ಕಾರಣದಿಂದ ಆರ್ಬಿಐ ಕಂಪನಿಯ ಆಡಳಿತ ಮಂಡಳಿಯನ್ನು ರದ್ದು ಮಾಡಿದೆ.
ಈಗ ಭಾರತೀಯ ರಿಸರ್ವ್ ಬ್ಯಾಂಕ್ ನಾಗೇಶ್ವರ ರಾವ್ ಅವರನ್ನು ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ನಾಗೇಶ್ವರ ರಾವ್ ಅವರು ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಕಾರ್ಯಕಾರಿ ನಿರ್ದೇಶಕರಾಗಿದ್ದಾರೆ.
ಕಂಪನಿಯನ್ನು ದಿವಾಳಿಯಾಗಿದೆ ಎಂದು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದ್ದು, 2019ರ ದಿವಾಳಿತನ ನಿಯಮಗಳ ಅನ್ವಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರ್ಬಿಐ ಹೇಳಿದ್ದು, ಮುಂಬೈನಲ್ಲಿರುವ ರಾಷ್ಟ್ರೀಯ ಕಂಪನಿಗಳ ಕಾನೂನು ನ್ಯಾಯಮಂಡಳಿಗೂ ಅರ್ಜಿ ಸಲ್ಲಿಕೆ ಮಾಡಿದ್ದು, ದಿವಾಳಿತನ ಪ್ರಕ್ರಿಯೆಯೂ ಅಧಿಕಾರಿಯನ್ನು ನೇಮಕ ಮಾಡುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ: ಟ್ವಿಟರ್ ಸಿಇಒ ಸ್ಥಾನಕ್ಕೆ ಜಾಕ್ ಡಾರ್ಸಿ ರಾಜೀನಾಮೆ: ಭಾರತೀಯ ಪರಾಗ್ ಅಗರ್ವಾಲ್‌ಗೆ ಮಹತ್ವದ ಹುದ್ದೆ