ETV Bharat / bharat

ಕೇರಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿ, ಸಿಎಂ ಸ್ಥಾನಕ್ಕೂ ಸಿದ್ಧ: ಮೆಟ್ರೋ ಮ್ಯಾನ್​​

author img

By

Published : Feb 19, 2021, 7:20 PM IST

ಇದೇ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದ್ದು, ಕಾಂಗ್ರೆಸ್ ಸೇರಿದಂತೆ ಎಲ್ಲಾ ಎಡಪಕ್ಷಗಳು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ರಣತಂತ್ರ ರೂಪಿಸುತ್ತಿವೆ

Metroman E Sreedharan
ಮೆಟ್ರೋಮ್ಯಾನ್​​ ಇ.ಶ್ರೀಧರನ್

ತಿರುವನಂತಪುರ (ಕೇರಳ): ಮೆಟ್ರೋಮ್ಯಾನ್​​ ಇ.ಶ್ರೀಧರನ್ ಫೆಬ್ರವರಿ 21ರ ನಂತರ ಬಿಜೆಪಿ ಸೇರ್ಪಡೆಯಾಗಲಿದ್ದು, ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಿಎಂ ಆಗಲು ತಾನು ಸಿದ್ಧ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ವಾರ ಇ.ಶ್ರೀಧರನ್ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಕೇರಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ತನ್ನಮ ಉದ್ದೇಶ ಎಂದಿದ್ದು, ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ ಎಂದಿದ್ದಾರೆ. ಬೃಹತ್ ಮಟ್ಟದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಹೇಳಿರುವ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಕೇರಳವನ್ನು ಸಾಲದ ಸುಳಿಯಿಂದ ಹೊರತರುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಕೋರ್ಟ್​ನಿಂದ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿ.. ಕಾರಣ!?

ಇದೇ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದ್ದು, ಕಾಂಗ್ರೆಸ್ ಸೇರಿದಂತೆ ಎಲ್ಲ ಎಡಪಕ್ಷಗಳು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ರಣತಂತ್ರ ರೂಪಿಸುತ್ತಿವೆ

ಮೆಟ್ರೋ ಮ್ಯಾನ್ ಇ. ಶ್ರೀಧರನ್ ಬಿಜೆಪಿ ಸೇರ್ಪಡೆಯಾಗಿರುವ ಕಾರಣದಿಂದ ಕೆಲವು ರಾಜಕೀಯ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಕೇರಳ ರಾಜಕೀಯದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಸೂಚಿಸುವ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧವಿದ್ದು, ಯಾವುದೇ ರ‍್ಯಾಲಿ ಮತ್ತು ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸುವುದಿಲ್ಲ. ಜೊತೆಗೆ ಗವರ್ನರ್ ಹುದ್ದೆಯಲ್ಲಿ ಆಸಕ್ತಿ ಇಲ್ಲ ಎಂದಿರುವ ಅವರು ಸಿಎಂ ಹುದ್ದೆ ನಿಭಾಯಿಸುವ ಆಸಕ್ತಿ ತೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.