ETV Bharat / bharat

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ; ಸುಪ್ರೀಂ ಕೋರ್ಟ್​ಗೆ ಕೇಂದ್ರದ ಸ್ಪಷ್ಟನೆ

author img

By ETV Bharat Karnataka Team

Published : Aug 31, 2023, 1:39 PM IST

Updated : Aug 31, 2023, 4:13 PM IST

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.

ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್​

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಯಾವಾಗ ಪುನಃಸ್ಥಾಪಿಸಲಾಗುವುದು ಎಂಬ ಬಗ್ಗೆ ನಿಖರವಾದ ಗಡುವು ನೀಡಲು ಈಗಲೇ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಹೇಳಿರುವ ಕೇಂದ್ರ ಸರ್ಕಾರ, ರಾಜ್ಯದಲ್ಲಿ ಚುನಾವಣೆಗಳನ್ನು ನಡೆಸಲು ಸಿದ್ಧವಿರುವುದಾಗಿ ಗುರುವಾರ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವು ತಾತ್ಕಾಲಿಕವಾಗಿದೆ ಎಂದು ಅದು ಸ್ಪಷ್ಟಪಡಿಸಿದೆ.

ಕಾಶ್ಮೀರ ಕಣಿವೆಯಲ್ಲಿ ಪದೇ ಪದೆ ಉದ್ಭವಿಸುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ತೊಂದರೆಗಳಿಂದಾಗಿ ಚುನಾವಣೆಗಳನ್ನು ನಡೆಸಲು ನಿಖರವಾದ ಸಮಯ ನೀಡಲು ಸರ್ಕಾರ ಅಸಮರ್ಥವಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಆದರೆ, ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಗಣನೀಯ ಪ್ರಗತಿ ಸಾಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಅವರು ಭರವಸೆ ನೀಡಿದರು.

ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಭಾರತದ ಚುನಾವಣಾ ಆಯೋಗ ಮತ್ತು ರಾಜ್ಯದ ಚುನಾವಣಾ ಆಯೋಗಕ್ಕೆ ಬಿಟ್ಟದ್ದು ಎಂದು ಮೆಹ್ತಾ ಹೇಳಿದರು. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಒದಗಿಸಿದ ಅಂಕಿ - ಅಂಶಗಳನ್ನು ವಿರೋಧಿಸಿದರು.

"ನೀವು 5,000 ಜನರನ್ನು ಗೃಹಬಂಧನದಲ್ಲಿ ಇಟ್ಟಾಗ ಮತ್ತು ರಾಜ್ಯಾದ್ಯಂತ 144ನೇ ಕಲಂ ಅನ್ವಯ ನಿಷೇಧಾಜ್ಞೆ ವಿಧಿಸಿರುವಾಗ ಅಲ್ಲಿ ಮುಷ್ಕರ ಇರಲು ಸಾಧ್ಯವಿಲ್ಲ! ದಯವಿಟ್ಟು ಈ ವಿಷಯವನ್ನು ನಾವು ವಾಸ್ತವಿಕ ಸಂಗತಿಗಳೊಂದಿಗೆ ಎದುರಿಸಬೇಕಾಗುತ್ತದೆ" ಎಂದು ಸಿಬಲ್ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್, ಈ ವಿಷಯವನ್ನು ಕೇವಲ ಸಾಂವಿಧಾನಿಕ ವಾದಗಳ ಆಧಾರದ ಮೇಲೆ ನಿರ್ಧರಿಸಲಾಗುವುದು ಮತ್ತು ಕೇಂದ್ರವು ಪ್ರಸ್ತುತಪಡಿಸಿದ ಅಂಕಿ - ಅಂಶಗಳ ಮೇಲೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ಪುನಃಸ್ಥಾಪಿಸಲು ನಿರ್ದಿಷ್ಟ ಕಾಲಮಿತಿ ಇದೆಯೇ ಎಂಬ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಪಡೆದು ತಿಳಿಸುವಂತೆ ಸಿಜೆಐ ಈ ಹಿಂದೆ ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದ್ದರು. ಜನವರಿ 26, 1950 ರಂದು ಅಸ್ತಿತ್ವದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಸ್ವಾಯತ್ತತೆ ಮತ್ತು ಆಗಸ್ಟ್ 5, 2019 ರಂದು ತಂದ ಅದರ ಸಂಪೂರ್ಣ ಏಕೀಕರಣದ ನಡುವಿನ ವ್ಯಾಪಕ ಅಂತರವನ್ನು ಮಧ್ಯಂತರ ಅವಧಿಯಲ್ಲಿ ಗಣನೀಯವಾಗಿ ನಿವಾರಿಸಲಾಗಿದೆ ಎಂಬುದನ್ನು ನ್ಯಾಯಾಲಯ ಈ ಹಿಂದೆ ಗಮನಿಸಿತ್ತು.

ಆಗಸ್ಟ್ 5, 2019 ರಂದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ತೆಗೆದುಹಾಕಿತ್ತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿತ್ತು. 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿತ್ತು. 370 ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ರ ನಿಬಂಧನೆಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ 2019 ರಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇದನ್ನೂ ಓದಿ : 3 ತಿಂಗಳಲ್ಲಿ 19 ಲಕ್ಷ ವಿಡಿಯೋ ಡಿಲೀಟ್ ಮಾಡಿದ ಯೂಟ್ಯೂಬ್!

Last Updated : Aug 31, 2023, 4:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.