ನವದೆಹಲಿ: ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ಅನರ್ಹತೆಯ ನೋಟಿಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಏಕನಾಥ ಶಿಂದೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಅಲ್ಲದೇ, ತಮ್ಮ ಬದಲಿಗೆ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರನ್ನು ಬೇರೆಯವನ್ನು ನೇಮಿಸಿರುವುದನ್ನೂ ಪ್ರಶ್ನಿಸಲಾಗಿದೆ.
ಮಹಾ ವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಏಕನಾಥ ಶಿಂದೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆಯ 16 ಜನ ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ, ಜೂನ್ 27ರೊಳಗೆ ಉತ್ತರಿಸುವಂತೆ ಸೂಚಿಸಿದ್ದರು.
ಇದೀಗ ಅನರ್ಹತೆಯ ನೋಟಿಸ್ ಪ್ರಶ್ನಿಸಿ ಬಂಡಾಯ ಶಾಸಕರ ನಾಯಕ ಶಿಂದೆ ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಶಿಂದೆ ಬಂಡಾಯ ಸಾರಿರುವ ಹಿನ್ನೆಲೆಯಲ್ಲಿ ಅವರನ್ನು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿ, ಈ ಸ್ಥಾನಕ್ಕೆ ಆಜಯ್ ಚೌಧರಿ ಅವರನ್ನು ನೇಮಿಸಲಾಗಿತ್ತು. ಇದನ್ನೂ ಪ್ರಶ್ನಿಸಿ ಶಿಂದೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: ಮೇ 20ರಂದೇ ಶಿಂದೆಗೆ ಸಿಎಂ ಹುದ್ದೆಯ ಆಫರ್ ಕೊಡಲಾಗಿತ್ತು: ಆದಿತ್ಯ ಠಾಕ್ರೆ