ಲಖನೌ(ಉತ್ತರ ಪ್ರದೇಶ): 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ರಂಗೇರಿದೆ. ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿರುವ ಭಾರತೀಯ ಜನತಾ ಪಾರ್ಟಿ ಇಂದು ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದೆ.
85 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಬಂಡಾಯ ಶಾಸಕಿ ಅದಿತಿ ಸಿಂಗ್ಗೆ ಬಿಜೆಪಿ ಟಿಕೆಟ್ ನೀಡಿದೆ. ರಾಯ್ಬರೇಲಿ ಕ್ಷೇತ್ರದಿಂದ ಅದಿತಿ ಕಣಕ್ಕಿಳಿಯಲಿದ್ದಾರೆ. ಇದರ ಜೊತೆಗೆ ಮಾಜಿ ಉನ್ನತ ಪೊಲೀಸ್ ಅಧಿಕಾರಿ ಅಸೀಮ್ ಅರುಣ್ ಅವರು ಕನೌಜ್ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
-
BJP releases its second list of candidates for the upcoming #UttarPradeshElections
— ANI UP/Uttarakhand (@ANINewsUP) January 21, 2022 " class="align-text-top noRightClick twitterSection" data="
Aditi Singh, who recently quit Congress to join BJP, to contest from Rae Bareli (1/2) pic.twitter.com/xQE51vy6v2
">BJP releases its second list of candidates for the upcoming #UttarPradeshElections
— ANI UP/Uttarakhand (@ANINewsUP) January 21, 2022
Aditi Singh, who recently quit Congress to join BJP, to contest from Rae Bareli (1/2) pic.twitter.com/xQE51vy6v2BJP releases its second list of candidates for the upcoming #UttarPradeshElections
— ANI UP/Uttarakhand (@ANINewsUP) January 21, 2022
Aditi Singh, who recently quit Congress to join BJP, to contest from Rae Bareli (1/2) pic.twitter.com/xQE51vy6v2
ರಾಯ್ಬರೇಲಿ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ಷೇತ್ರದಿಂದಲೇ ಲೋಕಸಭಾ ಸಂಸದರಾಗಿದ್ದಾರೆ. ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಇದೀಗ ಕಾಂಗ್ರೆಸ್ ಬಂಡಾಯ ಶಾಸಕಿಗೆ ಟಿಕೆಟ್ ನೀಡಿದೆ.
ಇದನ್ನೂ ಓದಿರಿ: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ರಾಯ್ಬರೇಲಿ ಬಂಡಾಯ ಶಾಸಕಿ ಅದಿತಿ, ಬಿಎಸ್ಪಿಗೂ ಆಘಾತ
ಕಳೆದ ವರ್ಷ ಬಿಜೆಪಿ ಸೇರಿರುವ ಅದಿತಿ ಸಿಂಗ್ : ಕಾಂಗ್ರೆಸ್ ಪಕ್ಷದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದ ಅದಿತಿ ಸಿಂಗ್ ಸದಾ ಒಂದಿಲ್ಲೊಂದು ವಿಚಾರವನ್ನಿಟ್ಟುಕೊಂಡು ಪಕ್ಷದ ವಿರುದ್ಧ ಹರಿಹಾಯುತ್ತಿದ್ದರು. ಈ ಮೂಲಕ ಬಂಡಾಯ ಶಾಸಕಿಯಾಗಿ ಗುರುತಿಸಿಕೊಂಡಿದ್ದರು.
ಇದರ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹಿಂದೆ ಕೃಷಿ ಕಾಯ್ದೆಗಳ ವಿಚಾರವಾಗಿ ಕೇಂದ್ರದ ನಿರ್ಧಾರ ಸಮರ್ಥಿಸಿ, ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಾದ ಮೇಲೆ ನವೆಂಬರ್ ತಿಂಗಳಲ್ಲಿ ಬಿಜೆಪಿ ಸೇರಿಕೊಂಡಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ