ನವದೆಹಲಿ: ಕೋವಿಡ್ ಸಂಕಷ್ಟದ ನಡುವೆ ಈ ಬಾರಿಯ ಗಣರಾಜ್ಯೋತ್ಸವ ರಾಜಫಥದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ರಾಜಪಥ್ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು.
ರಾಮನಾಥ್ ಕೋವಿಂದ್ ಅವರ ಜತೆ ಪತ್ನಿ ಸವಿತಾ ಕೋವಿಂದ್ ಕೂಡ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿ ಕೋವಿಡ್ ಹಾಗೂ ನವದೆಹಲಿಯಲ್ಲಿ ಆದ ಹವಾಮಾನ ವೈಪರೀತ್ಯದಿಂದಾಗಿ ಪರೇಡ್ 10;30ಕ್ಕೆ ಆರಂಭವಾಯಿತು.
ಜಗತ್ತಿನಲ್ಲಿ ಅತಿದೊಡ್ಡ ಸೇನೆ ಹೊಂದಿರುವ ಭಾರತ ಇಂದು ರಾಜಪಥದಲ್ಲಿ ತನ್ನ ಶಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದೆ. ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿದ್ಯತೆಗಳ ಪ್ರದರ್ಶನ ವಿಶ್ವದ ಗಮನ ಸೆಳೆಯುತ್ತಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
ಇದನ್ನೂ ಓದಿ:Republic Day: ಲಡಾಖ್ನಲ್ಲಿ ಕೊರೆಯುವ ಚಳಿಯಲ್ಲಿ ಐಟಿಬಿಪಿಯಿಂದ ಗಣರಾಜ್ಯೋತ್ಸವ ಆಚರಣೆ